ಕೂಡಿಗೆ, ಜು. ೩೧: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಗ್ರಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮದ ಅಭಿವೃದ್ಧಿ ಸಂಬAಧ ಸೇರಿದಂತೆ ಮಳೆ ಸಂಬAಧ ಅಗತ್ಯ ಕ್ರಮಗಳ ಕುರಿತು ಚರ್ಚೆಗಳು ನಡೆದವು. ೧೫ನೇ ಹಣಕಾಸು ಯೋಜನೆಯ ಅಡಿಯಲ್ಲಿ ವಿವಿಧ ವಾರ್ಡ್ಗಳಲ್ಲಿ ಕೈಗೊಳ್ಳಲಾದ ಪ್ರಗತಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಯಿತು.
ಅಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ವಾರ್ಡ್ಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಆದ್ಯತೆಯಾಗಿದೆ. ಗ್ರಾಮಸ್ಥರ ಸಹಕಾರದೊಂದಿಗೆ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕುಸುಮ, ಸದಸ್ಯರುಗಳಾದ ಆರ್.ಕೆ. ಚಂದ್ರು, ಎ.ಎಂ. ಲೋಕನಾಥ, ಸಮೀರ, ಜಾಜಿ, ಮಾವಜಿ ರಕ್ಷಿತ್, ಗಿರಿಜಮ್ಮ, ಕಾರ್ಯದರ್ಶಿ ಶೇಷಗಿರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.