ಮಡಿಕೇರಿ, ಆ. ೧: ನಗರದ ರೆಡ್‌ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು.
ನಗರದ ಸಮೀಪದಲ್ಲಿರುವ ತಡೆಗೋಡೆ ಬಳಿ ೫ ಕುಟುಂಬಗಳು ರೆಡ್‌ಕ್ರಾಸ್ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊAಡಿರುವ ಹಿನ್ನೆಲೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು.
ಈಗಾಗಲೇ ೨೦೧೮ ಮತ್ತು ೨೦೧೯ ರಲ್ಲಿ ಸಂತ್ರಸ್ತರಿಗೆ ಮನೆ ನೀಡಿರುವ ಜಾಗದಲ್ಲಿ ಮನೆ ಖಾಲಿ ಇದ್ದಲ್ಲಿ, ಮನೆ ಒದಗಿಸುವ ಸಂಬAಧ ಪರಿಶೀಲಿಸಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಶಾಸಕರು ಸಲಹೆ ಮಾಡಿದರು.
ಇಂತಹ ಕುಟುಂಬಗಳು ಸಂತ್ರಸ್ತ ಕುಟುಂಬಗಳ ಮನೆ ಪಟ್ಟಿಯಿಂದ ಏಕೆ ಕೈಬಿಟ್ಟಿವೆ ಎಂದು ತಿಳಿಯುತ್ತಿಲ್ಲ. ಮರು ಪರಿಶೀಲಿಸಿ ಮನೆ ನೀಡಲು ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸಲಹೆ ನೀಡಿದರು.
ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡುತ್ತಿದ್ದಂತೆ ಅಳಲು ತೋಡಿಕೊಂಡ ಸಂತ್ರಸ್ತರಾದ ರತ್ನಮ್ಮ ಅವರು ನಮ್ಮ ೫ ಕುಟುಂಬದವರಿಗೆ ಮನೆಯಾದರೆ ಸಾಕು, ಇನ್ನೇನೂ ಬೇಡ, ಇಲ್ಲಿನ ಐದು ಕುಟುಂಬಗಳು ಕೋಳಿ, ಹಂದಿ ಸಾಕಿಕೊಂಡು ಜೀವನ ನಡೆಸುತ್ತಿದ್ದೇವೆ ಎಂದು ದುಃಖಿತರಾದರು.
ಈ ಸಂದರ್ಭದಲ್ಲಿ ಧೈರ್ಯ ಹೇಳಿದ ಶಾಸಕರು ನಿಮ್ಮ ಅಳಲು ನಮಗೆ ಸಂಕಟ ತರುತ್ತದೆ. ಮನೆ ಒದಗಿಸಲು ಪ್ರಯತ್ನಿಸಲಾಗುವುದು. ಸದ್ಯ ಮುನ್ನೆಚ್ಚರ ವಹಿಸಬೇಕಿರುವುದರಿಂದ ಕಾಳಜಿ ಕೇಂದ್ರದಲ್ಲಿ ಇರುವಂತೆ ಕೋರಿದರು. ಸೂಕ್ಷö್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಮಾನವೀಯ ದೃಷ್ಟಿಯಿಂದ ಪ್ರತಿಯೊಬ್ಬರ ಜೀವ ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದೆ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಬದಲಿ ಜಾಗ/ನಿವೇಶನ, ಮನೆ ನೀಡಿದಲ್ಲಿ ಈಗಿರುವ ಜಾಗವನ್ನು ಬಿಡಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದರು.
ಇದೇ ಸಂದರ್ಭ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಅಡುಗೆಗೆ ಬೇಕಾದ ಸಾಮಗ್ರಿಗಳು, ಬೆಡ್‌ಶೀಟ್, ಟಾರ್ಪಲ್ ಹಾಗೂ ಕೊಡೆ ಮತ್ತಿತರ ಒಳಗೊಂಡ ಕಿಟ್‌ನ್ನು ಶಾಸಕ ಡಾ.ಮಂತರ್ ಗೌಡ ವಿತರಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ, ಈಗಾಗಲೇ ಹಂಚಿಕೆ ಮಾಡಲಾಗಿರುವ ಮನೆಗಳನ್ನು ಮರು ಪರಿಶೀಲಿಸುವಂತಾಗಬೇಕು. ಜೊತೆಗೆ ಇನ್ಪೋಸಿಸ್ ಸಂಸ್ಥೆಯ ಮನೆ ಸಹ ಬಳಸಿಕೊಳ್ಳುವಂತಾಗಬೇಕು. ಇಂತಹ ಸಂತ್ರಸ್ತರಿಗೆ ಕೂಡಲೇ ಮನೆ ಒದಗಿಸುವಂತಾಗಬೇಕು.
ಹೆಚ್ಚಿನ ಮಳೆಯಿಂದ ತೊಂದರೆಗೆ ಸಿಲುಕಿರುವವರು ಹತ್ತಿರದ ಗ್ರಾ.ಪಂ. ಅಥವಾ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಸಕರು ಸಂತ್ರಸ್ತರಿಗೆ ಊಟ ಬಡಿಸಿದರು. ನಂತರ ಶಾಸಕರು, ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೇರಿದಂತೆ ಎಲ್ಲರೂ ಸಂತ್ರಸ್ಥರ ಜತೆ ಊಟ ಸವಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ. ರವೀಂದ್ರ ರೈ ಮಾತನಾಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಪ್ರಾಕೃತಿಕ ವಿಕೋಪ ಹಾಗೂ ಆರೋಗ್ಯಕ್ಕೆ ಸಂಬAಧಿಸಿದAತೆ ವಿವಿಧ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುತ್ತಾ ಬಂದಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ತಹಶೀಲ್ದಾರ್ ಶ್ರೀಧರ, ಪೌರಾಯುಕ್ತ ಎಚ್.ಆರ್. ರಮೇಶ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಎಚ್.ಟಿ. ಅನಿಲ್, ಕಾರ್ಯದರ್ಶಿ ಧನಂಜಯ, ರೆಡ್‌ಕ್ರಾಸ್ ಸಂಸ್ಥೆಯ ಉತ್ತಯ್ಯ, ಕಾಂಗ್ರೆಸ್ ಪಕ್ಷದ ತೆನ್ನಿರಾ ಮೈನಾ, ಪ್ರಮುಖ ಜಗದೀಶ್, ಪ್ರಕಾಶ್ ಆಚಾರ್ಯ, ಪ್ರಭು ರೈ, ಮುದ್ದುರಾಜ್, ಸದಾ ಮುದ್ದಪ್ಪ, ಮೀನಾಜ್, ರವಿಗೌಡ, ನಗರಸಭೆ ಇಂಜಿನಿಯರ್‌ಗಳಾದ ಸತೀಶ್, ಹೇಮಂತ್ ಕುಮಾರ್, ತಾಹಿರ್ ಇತರರು ಇದ್ದರು.