ಮಡಿಕೇರಿ, ಆ.೧ : ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ೨೦೨೫ ರ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೬ ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ೧ ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ: ೨೫-೦೮-೨೦೨೫ ಸಂಜೆ ೫.೦೦ ಗಂಟೆಯ ಒಳಗಾಗಿ ಈ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೯೫೮೨೯ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಶೇಷ ಚೇತನಾ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.