ನಾಪೋಕ್ಲು, ಆ. ೧: ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡದಂತೆ ವ್ಯವಸ್ಥಿತವಾಗಿ ಗೌರಿ ಗಣೇಶೋತ್ಸವ ಆಚರಿಸಿ ಎಂದು ನಾಪೋಕ್ಲು ಠಾಣಾಧಿಕಾರಿ ಪಿ.ಜಿ. ರಾಘವೇಂದ್ರ ಗಣಪತಿ ಉತ್ಸವ ಸಮಿತಿ ಪ್ರಮುಖರಿಗೆ ಕರೆ ನೀಡಿದರು.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಗೌರಿ ಗಣೇಶೋತ್ಸವ ಸಮಿತಿಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳಲ್ಲಿ ಸಿ.ಸಿ. ಕ್ಯಾಮರ ಅಳವಡಿಸಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಿ. ಅನುಮತಿಯನ್ನು ಸಂಬAಧಪಟ್ಟ ಇಲಾಖೆಯಿಂದ ಕಡ್ಡಾಯವಾಗಿ ಪಡೆಯುವಂತೆ ತಿಳಿಸಿದರು. ನಿಯಮ ಮೀರಿ ಧ್ವನಿವರ್ಧಕ ಬಳಸದೆ ರಾತ್ರಿ ೧೦ ಗಂಟೆಯೊಳಗೆ ಮೆರವಣಿಗೆಯನ್ನು ಮುಕ್ತಾಯಗೊಳಿಸಬೇಕು. ವಿಸರ್ಜನೆ ವೇಳೆ ಈಜುಗಾರರು ಸ್ಥಳದಲ್ಲಿರುವಂತೆ ನೋಡಿಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಹೇಳಿದರು.

ಈ ಸಂದರ್ಭ ವಿವಿಧ ಗೌರಿ ಗಣೇಶೋತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.