ಕುಶಾಲನಗರ, ಆ. ೧: ಕುಶಾಲನಗರ ಕೊಡವ ಸಮಾಜದ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಿಲಿಕಾನ್ ಚೇಂಬರ್ ಅಳವಡಿಕೆಗೆ ರೂ. ೧.೫೧ ಲಕ್ಷ ಮಂಜೂರು ಮಾಡಲಾಗಿದೆ.

ಕ್ಷೇತ್ರದ ಯೋಜನೆಯ ೨೦೨೫-೨೬ರ ಸಾಲಿನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಲು ಮಂಜುನಾಥ ದೊರೆತಿದ್ದು ಈ ವರ್ಷದ ಆಗಸ್ಟ್ ೧೦ ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಯೋಜನೆಯ ಸಮುದಾಯ ಅಭಿವೃದ್ಧಿ ಭಾಗದ ನಿರ್ದೇಶಕರಾದ ಮಹಾಬಲ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಶಾಲನಗರ ಕೊಡವ ಸಮಾಜ ಆವರಣದಲ್ಲಿ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಯೋಜನೆಯ ನಿರ್ದೇಶಕರಾದ ಲೀಲಾವತಿ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಕೊಡವ ಸಮಾಜ ಅಧ್ಯಕ್ಷರಿಗೆ ಮಂಜೂರು ಪತ್ರ ವಿತರಿಸಲಾಯಿತು.