ವೀರಾಜಪೇಟೆ, ಜು. ೩೧: ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೆಚ್ಚೆಟ್ಟಿರ ಎಸ್. ತಮ್ಮಯ್ಯ ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‌ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದರು.