ಭಾಗಮಂಡಲ, ಆ. ೧: ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸ್ಥಳೀಯ ಸಂಪನ್ಮೂಲ ಕ್ರೋಢೀಕರಣ ಕುಂಠಿತಗೊAಡಿರುವುದರಿAದ ಭಗಂಡೇಶ್ವರ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ದೇವಸ್ಥಾನದ ಆವರಣದಲ್ಲಿರುವ ಕಸವನ್ನು ದೇವಸ್ಥಾನದವರೆಗೆ ಸಂಗ್ರಹಿಸಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದು ಭಾಗಮಂಡಲ ಗ್ರಾಮ ಪಂಚಾಯಿತಿ ಶ್ರೀ ಭಗಂಡೇಶ್ವರ

(ಮೊದಲ ಪುಟದಿಂದ) ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ.

ಜುಲೈ ಹತ್ತರಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ೨೦೨೪ _೨೫ರ ಸಾಲಿನವರೆಗೆ ಪಂಚಾಯಿತಿ ವ್ಯಾಪ್ತಿಯ ಹಾಗೂ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿ ವತಿಯಿಂದಲೇ ಸಂಗ್ರಹಿಸಿ ನಿರ್ವಹಿಸಲಾಗುತ್ತಿತ್ತು. ಕಸದ ನಿರ್ವಹಣೆಗೆ ಪ್ರತಿ ತಿಂಗಳು ೩೫ ಸಾವಿರದಂತೆ ಹಾಗೂ ಸ್ವಚ್ಛ ವಾಹಿನಿ ಇನ್ನಿತರ ವೆಚ್ಚವಾಗಿ ೪,೫೦,೦೦೦ ರೂಗಳನ್ನು ಖರ್ಚು ಮಾಡಲಾಗುತ್ತಿದೆ. ಭಾಗಮಂಡಲ, ತಲಕಾವೇರಿ, ತಾವೂರು, ಚೆದುಕಾರು ಮತ್ತು ಭಾಗಮಂಡಲದಿAದ ಕಸ ವಿಲೇವಾರಿ ಘಟಕಕ್ಕೆ ಅಂದಾಜು ೩೦ ಕಿಲೋಮೀಟರ್ ದೂರ ವಾರದಲ್ಲಿ ಮೂರು ದಿನ ಕಸ ವಿಲೇವಾರಿಯ ಸ್ವಚ್ಛ ವಾಹಿನಿ ಕಾರ್ಯ ನಿರ್ವಹಿಸುತ್ತಿದೆ. ಸಂಪನ್ಮೂಲದ ಕೊರತೆಯಿಂದ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿಗೆ ಸಂಗ್ರಹ ಮಾಡಲು ಸಾಧ್ಯವಾಗುವುದಿಲ್ಲ ಎಂದು ಸೂಚಿಸಲಾಗಿದೆ.

ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಿಗೆ ಆಗಮಿಸುವ ಭಕ್ತಾದಿಗಳಿಂದ ಮತ್ತು ಪ್ರವಾಸಿಗರಿಂದ ಶೇಖರಣೆಯಾಗಿರುವ ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯ ವಸ್ತುಗಳು ಕಸದ ಬುಟ್ಟಿಯಲ್ಲಿ ಸಂಪೂರ್ಣವಾಗಿ ತುಂಬಿಕೊAಡಿದ್ದು ವಿಲೇವಾರಿ ಮಾಡುವಂತೆ ಭಗಂಡೇಶ್ವರ, ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿಗಳು ಪಂಚಾಯಿತಿಯನ್ನು ಕೋರಿದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ.

ಹಲವು ವರ್ಷಗಳಿಂದ ಗ್ರಾಮ ಪಂಚಾಯಿತಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಹಾಗೂ ಕಸ ವಿಲೇವಾರಿ ಮಾಡುವ ಜವಾಬ್ದಾರಿ ನಿರ್ವಹಿಸುತ್ತಿತ್ತು. ೨೦೧೮ರಲ್ಲಿ ದೇವಸ್ಥಾನ ಸಮಿತಿ ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಟೆಂಡರ್ ಕರೆಯಲಾಗಿತ್ತು. ಯಥಾ ಸ್ಥಿತಿ ಕಾಪಾಡುವಂತೆ ಆದೇಶ ಬಂದ ಹಿನ್ನೆಲೆಯಲ್ಲಿ ಪಂಚಾಯಿತಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ ಸಾರ್ವಜನಿಕ ಕಾರ್ಯಕ್ಕೆ ಮೀಸಲಿಟ್ಟಿತ್ತು. ಕಳೆದ ಮಾರ್ಚ್ ತಿಂಗಳಲ್ಲಿ ದೇವಸ್ಥಾನದಲ್ಲಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವುದರಿAದ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಂಡು ದೇವಸ್ಥಾನದ ಆವರಣವನ್ನು ದೇವಾಲಯದವರೇ ಸ್ವಚ್ಚವಾಗಿಟ್ಟುಕೊಳ್ಳುವುದು ಎಂದು ತೀರ್ಮಾನಿಸಲಾಯಿತು.

ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ತಿಕ್ಕಾಟದಿಂದ ದೇವಸ್ಥಾನದ ಆವರಣದಲ್ಲಿ ಕಸದ ರಾಶಿ ತುಂಬಿ ಗಬ್ಬೆದ್ದು ನಾರುತ್ತಿದೆ. ಇತ್ತ ದೇವಾಲಯ ಸಮಿತಿ ಕಸ ವಿಲೇವಾರಿ ಮಾಡುತ್ತಿಲ್ಲ. ಅತ್ತ ಗ್ರಾಮ ಪಂಚಾಯಿತಿಯು ಗಮನಹರಿಸುತ್ತಿಲ್ಲ. ಈ ಗ್ರಾಮ ಪಂಚಾಯಿತಿ ೨೦೧೮ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದು ಕೊಂಡಿದೆ. ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಛತೆ ಮಾತ್ರ ಗಮನಹರಿಸುತ್ತಿದೆ ಎಂಬುದು ನಾಗರಿಕರ ಆರೋಪ. ಅಧಿಕಾರಿಗಳು ದೇವಾಲಯದ ಸ್ವಚ್ಛತೆಯತ್ತ ಗಮನ ಹರಿಸುವುದು ಅನಿವಾರ್ಯವಾಗಿದೆ. -ಸುನಿಲ್