ಮಡಿಕೇರಿ, ಆ. ೨: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ ೫ ರಿಂದ ೩೦ ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ ೧೮ ರಿಂದ ೪೫ ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಾ. ೫ ರಂದು ಬೆಳಿಗ್ಗೆ ೯ ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ ೯೫೦೫೮೯೪೨೪೭, ೮೯೭೦೪೭೬೦೫೦, ೯೫೯೧೫೧೪೧೫೪, ೯೬೮೬೨೪೮೩೬೯, ೮೯೭೦೪೪೬೬೪೪ ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.