ಮಡಿಕೇರಿ, ಆ. ೨: ಮಡಿಕೇರಿಯ ಅನತಿ ದೂರದಲ್ಲಿ ರಾಷ್ಟಿçÃಯ ಹೆದ್ದಾರಿ-೭೫ರ ಬದಿಯಲ್ಲಿ ಭೂಕುಸಿತ ತಡೆಯುವ ನಿಟ್ಟಿನಲ್ಲಿ ನಿರ್ಮಿಸಿರುವ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಸಂಸದ ಯದುವೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಗಿರೀಶ್ ಅವರೊಂದಿಗೆ ಚರ್ಚಿಸಿದ ಯದುವೀರ್ ಅವರು ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ಬಿರುಕು ಹೆಚ್ಚಾಗದಂತೆ ಮುಂಜಾಗ್ರತೆ ವಹಿಸಿ ದುರಸ್ತಿ ಕೈಗೊಳ್ಳುವಂತೆ ಸೂಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್, ಈಗಾಗಲೇ ತಡೆಗೋಡೆ ದುರಸ್ತಿ ಕಾರ್ಯ ನಡೆದಿದ್ದು, ಈ ಭಾಗದಲ್ಲಿ ನೆಲೆಸಿರುವ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್, ಮಡಿಕೇರಿ ನಗರ ಮಂಡಲ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ತಹಶೀಲ್ದಾರ್ ಶ್ರೀಧರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಸಂಸದರಾದ ಯದುವೀರ್ ಒಡೆಯರ್ ಅವರು ರಾಜಾಸೀಟು ಉದ್ಯಾನವನಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.