ಕೂಡಿಗೆ, ಆ. ೨: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ಮಲ್ಲಿಗೆ ಎಂಬವರ ಮನೆಯ ಗೋಡೆ ಮಳೆಯಿಂದಾಗಿ ಸಂಪೂರ್ಣ ಕುಸಿತಗೊಂಡಿದೆ.
ಮಲ್ಲಿಗೆ ಅವರು ವಿಶೇಷಚೇತನರಾಗಿದ್ದು, ಮನೆಯಲ್ಲಿ ಮಲಗಿದ್ದ ಸಂದರ್ಭ ಒಂದು ಬದಿಯ ಗೋಡೆ ಕುಸಿದಿದೆ. ಈ ವೇಳೆ ತಕ್ಷಣ ಅವರು ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಣಾ ಅಧಿಕಾರಿ ಸಂತೋಷ್, ಗ್ರಾಮ ಆಡಳಿತ ಅಧಿಕಾರಿ ಫೀರ್ ಮಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.