ಮಡಿಕೇರಿ, ಆ. ೨ : ಕಾರನ್ನು ಅಡ್ಡಗಟ್ಟಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ಇಲ್ಲಿನ ನ್ಯಾಯಾಲಯ ಖುಲಾಸೆಗೊಳಿಸಿದೆ.

ಕಳೆದ ತಾ. ೧೫-೪-೨೦೨೧ರಂದು ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಾನಗಲ್ ಗ್ರಾಮದ ರಸ್ತೆಯಲ್ಲಿ ಸಂಪತ್‌ಕುಮಾರ್ ಎಂಬವರು ಚಾಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ಗೌಡ, ಕಿರಣ್ ಹಾಗೂ ಕವನ್ ಅವರುಗಳು ಹಲ್ಲೆ ಮಾಡಿದ್ದಲ್ಲದೆ, ಮಾರಕಾಯುಧ ತೋರಿಸಿ ಕೊಲೆ ಬೆದರಿಕೆ ಒಡ್ಡಿರುವದಾಗಿ ಸಂಪತ್‌ಕುಮಾರ್ ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು; ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು; ದೂರಿನಲ್ಲಿ ಯಾವದೇ ಹುರುಳಿಲ್ಲವೆಂದು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿಗಳ ಪರ ವಕೀಲ ದುಗ್ಗಳ ಕಪಿಲ್‌ಕುಮಾರ್ ವಾದ ಮಂಡಿಸಿದರು.