ಮಡಿಕೇರಿ, ಆ. ೨: ಕೇರಳ ತಲಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬಿಬ್ಬರು ಸನ್ಯಾಸಿನಿಯರ ಮೇಲೆ ಮತಾಂತರ ಮತ್ತು ಮಾನವ ಕಳ್ಳ್ಳಸಾಗಾಣೆಯ ಆರೋಪ ಹೊರಿಸಿ ಬಂಧಿಸಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಶನಿವಾರ ಕೊಡಗು ಜಿಲ್ಲಾಡಳಿತ ಭವನದ ಎದುರು ಮೌನ ಪ್ರತಿಭಟನೆ ನಡೆಸಿತು.

ಕೂಡಲೇ ಸನ್ಯಾಸಿನಿಯರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿ ಗಳಿಗೆ ಮನವಿ ಸಲ್ಲಿಸಲಾಯಿತು.

ಮಾಧ್ಯಮಗಳೊಂದಿಗೆ ಮಾತ ನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಛತ್ತೀಸ್‌ಗಡದ ಬಿಜೆಪಿ ಸರ್ಕಾರ ಮತ್ತು ಕೋಮುವಾದಿ ಸಂಘಟನೆಯ ಪಿತೂರಿಯಿಂದ ಸನ್ಯಾಸಿನಿಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯಾಧ್ಯಕ್ಷ ವಿ.ಎ. ಲಾರೆನ್ಸ್, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕೀಂ ರೋಡ್ರಿಗಸ್, ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ, ಸಂಚಾಲಕ ಜಾನ್ಸನ್, ಪ್ರಮುಖರಾದ ಎಸ್.ಎಂ. ಡಿಸಿಲ್ವಾ, ಗೌರವಾಧ್ಯಕ್ಷ ಜೋಕೀಂ ವಾsಸ್ ಮತ್ತಿತರರು ಪಾಲ್ಗೊಂಡಿದ್ದರು.