ಮಡಿಕೇರಿ, ಆ. ೨: ಕರ್ನಾಟಕ ಸರ್ಕಾರವು ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಯನ್ನು ಅನುಷ್ಟಾನ ಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.

ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಇತ್ಯಾದಿ ಮಾಹಿತಿ ಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. ೨೦೨೫-೨೬ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. ೪೭,೦೦೦ ಹಾಗೂ ಅಡಿಕೆ ಬೆಳೆಗೆ ರೂ. ೧,೨೮,೦೦೦ ಆಗಿರುತ್ತದೆ. ವಿಮಾ ಕಂಪೆನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ. ೫ರ ವಿಮಾ ಮೊತ್ತ ರೂ. ೨,೩೫೦ ಹಾಗೂ ಅಡಿಕೆ ಬೆಳೆಗೆ ರೂ. ೬,೪೦೦ ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ ೨೦೨೫ ರ ತಾ. ೧೧ ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ. ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಮ್ಮ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಬೆಳೆ ಸಾಲ ಪಡೆಯದ ರೈತರು ಮಾತ್ರ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸಹ ವಿಮೆ ಯೋಜನೆಯಡಿ ನೊಂದಾಯಿಸಿ ಕೊಳ್ಳಬಹುದು.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಟಾನಗೊಳಿಸಲು ಕೊಡಗು ಜಿಲ್ಲೆಗೆ ಯುನೈಟೆಡ್ ಇಂಡಿಯಾನ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯು ಹಂಚಿಕೆ ಯಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ ಅಥವಾ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪೆನಿ (ಮೊ.೯೭೮೯೮೮೭೧೮೧ ಮತ್ತು ೯೭೮೯;೯೨೮೧೭೫), ಹಿರಿಯ ಸಹಾಯಕ ತೋಟಗಾರಿಕೆ £ರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಡಿಕೇರಿ ಮೊ.ನಂ.೯೪೪೮೪೦೭೮೧೬ ಸೋಮವಾರಪೇಟೆ ಮೊ. ನಂ. ೯೪೪೮೪೦೭೮೧೬, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಪೊನ್ನಂಪೇಟೆ ಮೊ.ನಂ. ೯೪೪೮೦೪೯೦೨೦, ಸಾಮಾನ್ಯ ಸೇವಾ ಕೇಂದ್ರಗಳನ್ನು (ಅSಅ) ಹಾಗೂ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.) ಮಡಿಕೇರಿ, ಕೊಡಗು ಮೊ.ನಂ. ೯೪೪೮೯೯೯೨೨೭ ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.