ಮಡಿಕೇರಿ, ಆ. ೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ಅರೆಭಾಷೆ ಜಂಬರ-ಆಟಿ ಕೂಟ ಕಾರ್ಯಕ್ರಮವು ತಾ.೧೦ ರಂದು ಬೆಳಿಗ್ಗೆ ೧೦ ಗಂಟೆಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಲಿದೆ.
ಪ್ರಗತಿಪರ ಕೃಷಿಕ ಎ.ಆರ್. ಗಂಗಾಧರ ಗೌಡ ಅಡ್ಕಾರು, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಸಾವಿತ್ರಿ ಅಡ್ಕಾರು ಇತರರು ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀ ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಕುಣಿತ ಭಜನೆ ನಡೆಯಲಿದೆ. ನಂತರ ಸೋಬಾನೆ (ಹೆಣ್ಣು ಮಕ್ಕಳಿಗೆ), ಅಜ್ಜಿ ಕಥೆ (೫೦ ವರ್ಷ ಮೇಲ್ಪಟ್ಟ ಎಲ್ಲರೂ ಭಾಗವಹಿಸಬಹುದು), ನೇಜಿ ಹಾಡ್ (ಎಲ್ಲರೂ ಭಾಗವಹಿಸಬಹುದು), ಕಾಯಿಗೆ ಕಲ್ಲ್ ಹೊಡೆಯುವುದು (ಪುರುಷರಿಗೆ) ಮತ್ತು ಪುಟಾಣಿ ಮಕ್ಕಳಿಗೆ ಲಕ್ಕಿ ಗೇಮ್ (೫ ರಿಂದ ೧೦ ವರ್ಷದ ಮಕ್ಕಳಿಗೆ) ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ೨ ಗಂಟೆಯಿAದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ ೨.೩೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸುಳ್ಯ ಎಂಜಿಎA ವಿದ್ಯಾಸಂಸ್ಥೆಯ ಸಂಚಾಲಕ ದೊಡ್ಡಣ್ಣ ಬರೆಮೇಲು, ಜಾಲ್ಸೂರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಕಾಮತ್, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷರು ನಿವೃತ್ತ ಯೋಧರು ಅಡ್ಡಂತಡ್ಕ ದೇರಣ್ಣ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ತಿರುಮಲೇಶ್ವರಿ ಅರ್ಭಡ್ಕ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್, ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮನೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ.