ಕೂಡಿಗೆ, ಆ. ೩: ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಕಾವೇರಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆ ೨೦೨೪ ಮತ್ತು ೨೫ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ೨೫ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ನಿವೃತ್ತ ಪ್ರಾಂಶುಪಾಲ ಡಾ. ಬಸಪ್ಪ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಕಾವೇರಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಗೆ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕಾಲೇಜು ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಪ್ರಮಾಣ ವಚನ ಬೋಧಿಸಿದರು.
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪಿಯು ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆದಂತಹ ಮೂವರು ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿ ಕಟ್ಟೆ, ರಮೇಶ್, ನಿವೃತ್ತ ಪ್ರಾಂಶುಪಾಲ ಡಾ. ಬಸಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು. ರಮೀಶ್ ಸ್ವಾಗತಿಸಿ, ಸತೀಶ್ ವಂದಿಸಿದರು.