ನಾಪೋಕ್ಲು, ಆ. ೩: ಇಲ್ಲಿಗೆ ಸಮೀಪದ ಚೇರಂಬಾಣೆಯ ಅರುಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಡಿ.ಎಸ್. ರಾಮಕೃಷ್ಣ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಅರುಣ ವಿದ್ಯಾ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಮತ್ತು ಪ್ರಾಂಶುಪಾಲರಾಗಿ ೩೫ ವರ್ಷಗಳ ಕಾಲ ಸೇವೆಸಲ್ಲಿಸಿ ವಯೋನಿವೃತ್ತಿ ಹೊಂದಿದ ರಾಮಕೃಷ್ಣ ಅವರನ್ನು ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.