ಮಡಿಕೇರಿ, ಆ. ೩: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ. gov.iಟಿ ನೋಡಬಹುದು. ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ. gov.iಟಿ ದೂ.ಸಂ.೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಹಾಗೆಯೇ ಪ್ರಸಕ್ತ (೨೦೨೫-೨೬) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.