ನಾಪೋಕ್ಲು, ಆ. ೩: ನಾಪೋಕ್ಲು ಸುತ್ತಮುತ್ತಲಿನ ಗ್ರಾಮಗಳಲ್ಲಿ ೪-೫ ದಿನಗಳಿಂದ ಭಾರಿ ಗಾಳಿ ಮಳೆಯಿಂದಾಗಿ ಮರಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ತೀವ್ರ ಸಂಕಷ್ಟ ಎದುರಾಗಿದೆ. ಹಾಲು, ಮೀನು, ಮಾಂಸ ಮಾರಾಟಗಾರರು ಸೇರಿದಂತೆ ಇತರ ವ್ಯಾಪಾರಿಗಳಿಗೂ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರು ಪೂರೈಕೆಗೂ ತೊಂದರೆ ಅನುಭವಿಸುವಂತಾಗಿದೆ. ಸ್ಥಳೀಯ ಚೆಸ್ಕಾಂ ಅಭಿಯಂತರ ಸುರೇಶ್ ಹಾಗೂ ಸಿಬ್ಬಂದಿಗಳು ಮಳೆ ಗಾಳಿಯನ್ನು ಲೆಕ್ಕಿಸದೆ ಸಿಬ್ಬಂದಿಗಳ ಕೊರತೆಯ ನಡುವೆಯೂ ಕಾರ್ಯಪ್ರವೃತ್ತರಾಗಿದ್ದಾರೆ.