ಮಡಿಕೇರಿ, ಆ. ೩: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಇಪ್ಪತ್ತೆöÊದು ವರ್ಷಗಳ ಹಿಂದೆ ನಿರ್ಮಾಣವಾಗಿ, ಇಂದು ದುಸ್ಥಿತಿಯಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿವಿಧೋದ್ದೇಶ ಸಭಾಂಗಣವನ್ನು ಅಧಿಕಾರಿಗಳು, ಮುಖಂಡರೊAದಿಗೆ ಶಾಸಕ ಮಂತರ್‌ಗೌಡ ಪರಿಶೀಲಿಸಿದರು.

ಇಪ್ಪತ್ತೆöÊದು ವರ್ಷಗಳ ಹಿಂದೆ ಕೊಡಗು ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಜಮ್ಮಡ ಕರುಂಬಯ್ಯ ಮತ್ತು ಅವರ ಅನೇಕ ಒಡನಾಡಿಗಳು ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಸಂಘವನ್ನು ಸ್ಥಾಪಿಸಿದರು. ನಂತರ ೨ ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸಭಾಂಗಣ ನಿರ್ಮಾಣ ಮಾಡಿರುವುದು ನಮ್ಮ ಹಿರಿಯರ ಘನತೆ ಎತ್ತಿಹಿಡಿದಿದೆ. ಅವರ ಅಸ್ಮಿತೆಯ ಪ್ರತೀಕವಾಗಿರುವ ಸಭಾಂಗಣವನ್ನು ಸುಸ್ಥಿತಿಯಲ್ಲಿಡುವುದು ತಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ ಡಾ.ಮಂತರ್‌ಗೌಡ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸಭಾಂಗಣ ಅಭಿವೃದ್ಧಿಪಡಿಸಲು ಅಂದಾಜು ಪಟ್ಟಿ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಪ್ರಭು ರೈ, ಪ್ರಮುಖರಾದ ಪ್ರಕಾಶ್ ಆಚಾರ್ಯ, ರವಿಗೌಡ, ನಗರಸಭಾ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಪ್ರಮುಖರಾದ ವಿ.ಜಿ.ಮೋಹನ್, ಚಂದ್ರಶೇಖರ್, ಕೊತ್ತೊಳಿ ಕವನ್, ವಸಂತ್ ಭಟ್, ಸೇರಿದಂತೆ ನಗರಸಭೆಯ ಇಂಜಿನಿಯರ್‌ಗಳು ಇದ್ದರು.