ಸುಂಟಿಕೊಪ್ಪ, ಆ. ೪: ಇಲ್ಲಿಗೆ ಸಮೀಪದ ಐಗೂರು ಕಾಜೂರು ಹಾಗೂ ಯಡವಾರೆ ಗ್ರಾಮದಲ್ಲಿ ಕಳೆದ ೧೩ ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ. ಮತ್ತೊಂದೆಡೆ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಮರಗಳು ಎಲ್ಲೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಚೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯುತ್ ಹಾಗೂ ಕುಡಿಯುವ ನೀರಿನ ಸರಬರಾಜು ಯಾವಾಗ ಲಭ್ಯವಾಗುತ್ತದೆ ಎಂದು ಗ್ರಾಮಸ್ಥರು ಕಾಯುತ್ತಿದ್ದಾರೆ.