ಕುಶಾಲನಗರ, ಆ. ೪: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ೧೨೦ ಮೈಕ್ರಾನ್ ಮತ್ತು ಅದಕ್ಕಿಂತ ಕಡಿಮೆ ಪ್ರಮಾಣದ ಎಲ್ಲಾ ರೀತಿಯ ಏಕ ಬಳಕೆ ಪ್ಲಾಸ್ಟಿಕ್ ನಿರ್ಬಂಧಕ್ಕೆ ಪುರಸಭೆ ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಪುರಸಭೆ ಅಧ್ಯಕ್ಷರಾದ ಜಯಲಕ್ಷಿö್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಈ ಸಂಬAಧ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಕರಪತ್ರ ಹಂಚುವುದು, ವ್ಯಾಪಕ ಪ್ರಚಾರದೊಂದಿಗೆ ನಾಗರಿಕರಿಗೆ ಪ್ರವಾಸಿಗರಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವುದರೊಂದಿಗೆ ಈ ಬಗ್ಗೆ ಅರಿವು ಮೂಡಿಸುವುದು, ಮುಂದಿನ ೩೦ ದಿನಗಳ ಕಾಲ ಅವಕಾಶ ನೀಡಿ ನಂತರ ನಿಯಮ ಉಲ್ಲಂಘನೆ ಆದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಚೇಂಬರ್ ಆಫ್ ಕಾಮರ್ಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಪುರಸಭೆ ಸೇರಿದಂತೆ ಇತರ ಇಲಾಖೆಗಳ ಸಹಾಯದೊಂದಿಗೆ ಕುಶಾಲನಗರದ ಗಡಿ ಭಾಗದಲ್ಲಿ ವಾಹನಗಳಲ್ಲಿ ಪ್ಲಾಸ್ಟಿಕ್‌ಗಳ ತಪಾಸಣೆ ಮಾಡುವ ಕಾರ್ಯ ನಿರ್ವಹಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಕುಶಾಲನಗರ ಪುರಸಭೆಯ ಸುಮಾರು ೬ ಸಾವಿರಕ್ಕೂ ಅಧಿಕ ಮನೆಗಳಿಗೆ ಒಣ ಮತ್ತು ಹಸಿ ಕಸ ಸಂಗ್ರಹಕ್ಕೆ ಕಸದ ಬುಟ್ಟಿಯನ್ನು ವಿತರಿಸುವ ಕಾರ್ಯ ಸದ್ಯದಲ್ಲೇ ನಡೆಯುವುದಾಗಿ ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್ ಮಾಹಿತಿ ನೀಡಿದರು. ಕಸದ ಬುಟ್ಟಿಗಳು ಈಗಾಗಲೇ ಕಚೇರಿಗೆ ಬಂದಿದ್ದು ಇವುಗಳ ವಿತರಣೆ ನಡೆಯಲಿದೆ ಎಂದರು.
ಮನೆ ಮಾಲೀಕರು ಸೇರಿದಂತೆ ಬಾಡಿಗೆದಾರರಿಗೂ ಈ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸರಕಾರದ ಸೂಚನೆ ಪರಿಶೀಲಿಸಿ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಮಾರಾಟಕ್ಕೆ ಪಟ್ಟಣದಲ್ಲಿ ನಿರ್ಬಂಧ ಹೇರಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ಚರ್ಚೆ ನಡೆಯಿತು.
ಪುರಸಭೆ ಉಪಾಧ್ಯಕ್ಷೆ ಪುಟ್ಟ ಲಕ್ಷö್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಮತ್ತು ಸದಸ್ಯರು ಹಾಗೂ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.