ಕುಶಾಲನಗರ, ಆ. ೪: ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ಬದಿಗಳಲ್ಲಿ ಅಕ್ರಮ ಬಡಾವಣೆಗಳು, ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗುತ್ತಿದ್ದು ಈ ಸಂಬAಧ ನದಿ ಜಾಗ ಒತ್ತುವರಿ ಮತ್ತು ಬಫರ್ ಜೋನ್ ಸಂಬAಧ ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಹಲವು ಬಾರಿ ಭೂ ದಾಖಲೆಗಳ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ರೀತಿಯ ಸ್ಪಂದನ ದೊರಕದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

ವೀರಾಜಪೇಟೆ ತಾಲೂಕು ಆರ್ಜಿ ಗ್ರಾಮದ ನಿವಾಸಿ ವಿ.ಟಿ. ಮದನ್ ಎಂಬವರು ಫೆಬ್ರವರಿ ತಿಂಗಳಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದು ಕುಶಾಲನಗರದಲ್ಲಿ ಹರಿದು ಹೋಗುತ್ತಿರುವ ಕಾವೇರಿ ನದಿಯ ಬದಿಗಳಲ್ಲಿ ಅನಧಿಕೃತವಾಗಿ ಹೋಂ ಸ್ಟೇ, ರೆಸಾರ್ಟ್, ಸ್ಪಾ, ಹೊಟೇಲ್ ಕೈಗಾರಿಕೆ ಕಟ್ಟಡಗಳು, ನಿಸರ್ಗಧಾಮ, ವಾಣಿಜ್ಯ ಸಂಕೀರ್ಣಗಳು ಮತ್ತು ಬಡಾವಣೆಗಳನ್ನು ನಿರ್ಮಿಸಲು ನದಿಯ ಬಫರ್ ಜೋನ್ ಗಳನ್ನು ಬಳಸುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ. ಪರಿಸರ ಸಂರಕ್ಷಣೆ ಸಂಬAಧ ಕಾವೇರಿ ನದಿ ಜಾಗ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದನ್ನು ತೆರವುಗೊಳಿಸುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೂ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬAಧ ಜಿಲ್ಲಾಧಿಕಾರಿಗಳು ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದರು.

ವಿಷಯಕ್ಕೆ ಸಂಬAಧಿಸಿದAತೆ ಸಂಬAಧಿಸಿದ ಒತ್ತುವರಿ ಸರ್ವೆ ಕಾರ್ಯ ಕೈಗೊಂಡು ಕೂಡಲೇ ವರದಿ ಸಲ್ಲಿಸುವಂತೆ ಸೋಮವಾರಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ತಹಶೀಲ್ದಾರ್ ಕಚೇರಿಯಿಂದ ಆರು ಪತ್ರಗಳನ್ನು ಬರೆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರುದಾರ ಮದನ್ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಹಲವು ಬಾರಿ ಭೂ ದಾಖಲೆಗಳ ಇಲಾಖೆಗೆ ಪತ್ರ ಬರೆದಿದ್ದು, ಯಾವುದೇ ರೀತಿಯ ಸ್ಪಂದನೆ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ತಾಲೂಕು ಕಚೇರಿಯಿಂದ ೨೦೨೪ರ ಜೂನ್, ಸೆಪ್ಟೆಂಬರ್ ನವೆಂಬರ್ ಮತ್ತು ೨೦೨೫ರ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಒಟ್ಟು ಆರು ನೆನಪೋಲೆಗಳನ್ನು ಸೋಮವಾರಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ರವಾನಿಸಲಾಗಿದೆ ಎಂದು ದಾಖಲೆ ಸಹಿತ ಮಾಹಿತಿ ನೀಡಿದ್ದಾರೆ.