ಸೋಮವಾರಪೇಟೆ, ಆ. ೪: ತಾಲೂಕು ಕಚೇರಿ, ಸರ್ವೆ ಇಲಾಖೆ ಹಾಗೂ ನೆಮ್ಮದಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕು ಕಚೇರಿಯಲ್ಲಿರುವ ನೆಮ್ಮದಿ ಕೇಂದ್ರದಲ್ಲಿ ಆಧಾರ್ ಕಾರ್ಡ್ಗೆ ಸಂಬAಧಿಸಿದAತೆ ತಿದ್ದುಪಡಿ, ನೂತನ ಕಾರ್ಡ್ಗೆ ಅರ್ಜಿ ಹಾಕುವಲ್ಲಿ ನಿಧಾನ ಗತಿ ಅನುಸರಿಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದರು. ಆಧಾರ್ ಕಾರ್ಡ್ ಕೆಲಸಕ್ಕೆ ಬೆಳಗ್ಗಿನಿಂದ ಸಂಜೆಯವರೆಗೂ ಕಚೇರಿಯಲ್ಲಿ ಕಾಯುವಂತಾಗಿದೆ. ಒಮ್ಮೊಮ್ಮೆ ದಿನವಿಡೀ ಕುಳಿತರೂ ಕೆಲಸ ಆಗುವುದಿಲ್ಲ ಎಂದು ಸಾರ್ವಜನಿಕರು ಶಾಸಕರೆದುರು ದೂರಿದರು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡಬೇಕೆಂದು ಶಾಸಕರು ಸಂಬAಧಿಸಿದ ಆಪರೇಟರ್‌ಗೆ ಸೂಚನೆ ನೀಡಿದರು. ಕೆಲವೊಮ್ಮೆ ಸರ್ವರ್ ಡೌನ್ ಆಗುವುದರಿಂದ ಸಮಸ್ಯೆಯಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದರು. ಕಚೇರಿಗೆ ಆಗಮಿಸುವ ಹಿರಿಯ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅವರುಗಳಿಗೆ ಕುಳಿತುಕೊಳ್ಳಲು ಕುರ್ಚಿ ನೀಡಬೇಕು. ಆದ್ಯತೆಯ ಮೇರೆ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ವೃಥಾ ಅಲೆದಾಡಿಸಬಾರದು ಎಂದು ಸಿಬ್ಬಂದಿಗಳಿಗೆ ಶಾಸಕರು ಸೂಚಿಸಿದರು. ಕಚೇರಿಯಲ್ಲಿದ್ದ ಸಾರ್ವಜನಿಕರನ್ನು ಮಾತನಾಡಿಸಿದ ಶಾಸಕರು, ಅವರುಗಳಿಗೆ ಆಗಬೇಕಿರುವ ಕೆಲಸ ಕಾರ್ಯಗಳನ್ನು ತುರ್ತಾಗಿ ಮಾಡಿಕೊಡಬೇಕು ಎಂದರು. ಹರದೂರು ಗ್ರಾಮದ ೯೦ ವರ್ಷದ ವೃದ್ಧೆ ಬೈರಿ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಮುಖಾಂತರ ಜವಾಬ್ದಾರಿ ವಹಿಸಿಕೊಂಡು ಆಧಾರ್ ಕಾರ್ಡ್ ಮಾಡಿಸಿಕೊಡಲಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ ಹೇಳಿದರು. ನಂತರ ಸರ್ವೆ ಇಲಾಖೆಗೆ ಆಗಮಿಸಿದ ಶಾಸಕರು, ಕಚೇರಿ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಗಮನಿಸಿದರು. ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭ ಅಕ್ರಮ ಸಕ್ರಮ ಸಮಿತಿ ಸದಸ್ಯ ಬಿ.ಬಿ. ಸತೀಶ್, ಜೆ.ಎಲ್. ಜನಾರ್ದನ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.