ವೀರಾಜಪೇಟೆ, ಆ. ೫: ವೀರಾಜಪೇಟೆಯ ತೆಲುಗು ಶೆಟ್ಟರ ಬೀದಿಯಲ್ಲಿರುವ ದಕ್ಷಿಣ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಆಟಿ ಮಾಸದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ವಿವಿಧ ಪೂಜೆ ಪುನಸ್ಕಾರಗಳು ನಡೆದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಧ್ಯಾಹ್ನದ ಮಹಾಪೂಜೆಯ ಬಳಿಕ ನೆರೆದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ದೇವಸ್ಥಾನ ಸಮಿತಿಯ ಅಧ್ಯಕ್ಷ ಟಿ.ಪಿ. ಕೃಷ್ಣ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಭಕ್ತರು ಅಧಿಕ ಸಂಖ್ಯೆಯಲ್ಲಿ ನೆರೆದಿದ್ದರು.