ನಾಪೋಕ್ಲು, ಆ. ೫: ಬಿಲ್ಲವ ಸಮಾಜದ ವತಿಯಿಂದ ತಾ. ೧೦ ರಂದು ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ‘ಆಟಿಡೊಂಜಿ ದಿನ-೨೦೨೫’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಬಿ.ಎಂ.ಪ್ರತೀಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಕ್ತದಾನ ಶಿಬಿರ, ಬಿಲ್ಲವ ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತÀರ್ ಗೌಡ, ರಾಮನಗರ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭ ಬಿಲ್ಲವ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ಬಳಿಕ ಆಟಿ ಮಾಸದ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ ೩ ಗಂಟೆಗೆ ಬಿಲ್ಲವ ಸಮಾಜದ ಮಹಾಸಭೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಡಾ. ಕರುಂಬಯ್ಯ, ಭಾಜಪ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ಲಿಂಗಪ್ಪ, ಮಕ್ಕಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉದ್ಯಮಿ ರಮೇಶ್, ಮಡಿಕೇರಿ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಸೋಮವಾರಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಚಂದ್ರಹಾಸ, ವೀರಾಜಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಗಣೇಶ್, ಕುಶಾಲನಗರ ಬಿಲ್ಲವ ಸಮಾಜದ ಅಧ್ಯಕ್ಷ ಸುಧೀರ್, ಸುಂಟಿಕೊಪ್ಪ ಬಿಲ್ಲವ ಸಮಾಜದ ಅಧ್ಯಕ್ಷ ಮಣಿ ಮುಖೇಶ್, ಸಿದ್ದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ವಿ. ರಂಜನ್ ಹಾಗೂ ಬಂಟ್ವಾಳದ ವಾಗ್ಮಿ ಕುಮಾರಿ ಶ್ರೀನಿಧಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ನಾಪೋಕ್ಲು ಬಿಲ್ಲವ ಸಮಾಜದ ಉಪಾಧ್ಯಕ್ಷ ಬಿ.ಆರ್. ವಸಂತ, ಕಾರ್ಯದರ್ಶಿ ಕೆ.ಎಸ್. ಲೋಹಿತ್, ಸಮಿತಿ ಸದಸ್ಯರಾದ ಧನಂಜಯ, ಸುನಿಲ್ ಉಪಸ್ಥಿತರಿದ್ದರು.