ಮಡಿಕೇರಿ, ಆ. ೫: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಪ್ರಮುಖರು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಇತ್ತೀಚೆಗೆ ಭೇಟಿಯಾಗಿ ಒಕ್ಕೂಟದ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಮನವಿ ಸಲ್ಲಿಸಿದರು. ಅಧ್ಯಕ್ಷೆ ಕನ್ನಂಡ ಕವಿತಾ ಹಾಗೂ ಪದಾಧಿಕಾರಿಗಳು ಮಾಜಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ ನೇತೃತ್ವದಲ್ಲಿ ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು.