ಕೊಡಗು ಜಿಲ್ಲೆಯಲ್ಲಿ ಕಳೆದ ೪-೫ ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವ ಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿರುತ್ತದೆ. ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ರ ವಿಧಿ ೩೧, ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ ೨೦೦೫ರ ಕಲಂ ೩೩, ಮೋಟಾರು ವಾಹನಗಳ ಕಾಯ್ದೆ ೧೯೮೮ ರ ಕಲಂ ೧೧೫ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ ೧೯೮೯ರ (ತಿದ್ದುಪಡಿ ನಿಯಮಾವಳಿ ೧೯೯೦) ನಿಯಮ ೨೨೧-ಎ (೫) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ತಾ. ೬ ರಿಂದ ೨೫ರವರೆಗೆ ಭಾರೀ ವಾಹನ ಸಂಚಾರ ನಿಷೇಧಿಸಿ ಆದೇಶಿಸಿದ್ದಾರೆ.

ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂರ‍್ಸ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಅಕ್ಸಿಲ್) ವಾಹನಗಳು / ರ‍್ಟಿಕ್ಯೂಲೇಟೆಡ್ ವಾಹನಗಳನ್ನು ನಿಷೇಧಿಸಲಾಗಿದೆ.

ರಸಗೊಬ್ಬರ ಪೂರೈಕೆ ವಾಹನಗಳು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‌ಗಳು) ಸೇರಿದಂತೆ ವಾಹನಗಳಿಗೆ ನಿರ್ಬಂಧದಿAದ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟಿçÃಯ ಹೆದ್ದಾರಿ ೨೭೫ ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ ೨೪ ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದAತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.