ಮಡಿಕೇರಿ, ಆ. ೫: ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣ ಸೇರಿದಂತೆ ೨೦೨೬ರ ರಾಷ್ಟಿçÃಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೧೦ ರಂದು ಸುಂಟಿಕೊಪ್ಪದಲ್ಲಿ ೯ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.