ಮಡಿಕೇರಿ: ಇತ್ತೀಚೆಗೆ ಬಲ್ಯಮಂಡೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ತೂಚಮಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡಿಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬಲ್ಯಮಂಡೂರು ಶಾಲೆಯ ಇಕೋ ಕ್ಲಬ್ ತಂಡದ ವತಿಯಿಂದ ಗೋಣಿಕೊಪ್ಪದ ರೋಟರಿ ಸಂಸ್ಥೆ ಆಶ್ರಯದಲ್ಲಿ ಬಲ್ಯಮಂಡೂರಿನಲ್ಲಿ ವನಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇಯಂಡ ಜಯಂತಿ, ಕಾರ್ಯದರ್ಶಿ ಸುಶೀಲಾ, ರೋಟರಿ ಸಂಸ್ಥೆ ಅಧ್ಯಕ್ಷ ವಿಜಯ್, ಕಾರ್ಯದರ್ಶಿ ಪ್ರಮೋದ್ ಕಾಮತ್, ಸಹಾಯಕ ರಾಜ್ಯಪಾಲ ದಿಲನ್ ಚಂಗಪ್ಪ ಹಾಜರಿದ್ದರು. ಡಾ. ಚಂದ್ರಶೇಖರ್ ಅವರು ಮಾತನಾಡಿ, ಮಕ್ಕಳು ಹೆಚ್ಚು ಸಸಿಗಳ ರಕ್ಷಣೆ ಮಾಡಬೇಕು ಎಂದರು. ಈ ಸಂದರ್ಭ ವಿವಿಧ ಗಿಡಗಳನ್ನು ನೆಡಲಾಯಿತು.
ಬಲ್ಯಮಂಡೂರು ಶಾಲೆಯ ಶಿಕ್ಷಕರಾದ ಕೆ.ಪಿ ಪವಿತ್ರ, ತೂಚಮಕೇರಿ ಶಾಲೆಯ ಮುಖ್ಯ ಶಿಕ್ಷಕರಾದ ಸುಬ್ರಮಣ್ಯ, ಶಿಕ್ಷಕರಾದ ತಿರುನೆಲ್ಲಿಮಾಡ ಜೀವನ್, ಹಸೀನಾ, ರೇಖಾ, ಮಂಜುಳಾ, ಅಂಗನವಾಡಿ ಕಾರ್ಯಕರ್ತೆ ಪದ್ಮ ಎಂ. ಕೆ. ಸಹಾಯಕಿ ಸೌಮ್ಯ, ಗ್ರಾಮಸ್ಥರಾದ ಪ್ರೇಮ, ಸುನೋಜಮ್ಮ ಹಾಜರಿದ್ದರು.
ಕೂಡಿಗೆ: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ವತಿಯಿಂದ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಆಚರಿಸಲಾಯಿತು. ಈ ಸಂದರ್ಭ ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ. ಭರತ್ ಮಾತನಾಡಿ ವೈಯಕ್ತಿಕ ಶುಚಿತ್ವದ ಬಗ್ಗೆ, ಪರಿಸರ ಶುಚಿತ್ವದ ಬಗ್ಗೆ, ರಕ್ತಹೀನತೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಗ್ಯೂ ಜ್ವರದ ಬಗ್ಗೆ ಡೆಂಗ್ಯೂ ಜ್ವರದ ಲಕ್ಷಣಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಸಂಚಾರಿ ಗಿರಿಜನ ಆರೋಗ್ಯ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ ರಾವ್ ಕದಂ ಮಾತನಾಡಿ, ಚಿಕನ್ ಗುನ್ಯಾ ಜ್ವರದ ಬಗ್ಗೆ ಹಾಗೂ ರಾಷ್ಟಿçÃಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಸೌಮ್ಯ ಮಾತನಾಡಿ, ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ, ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ಒದಗಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಫಾರ್ಮಸಿ ಅಧಿಕಾರಿ ಶಹನಾಜ್ , ಈಶ್ವರಿ ವೆನಿಲ್ಲಾ, ಸಮುದಾಯ ಆರೋಗ್ಯ ಅಧಿಕಾರಿ ರಾಕೇಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀದೇವಿ ಹಾಗೂ ಶಿಕ್ಷಕರ ವೃಂದ, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಡಂಗ: ಸ್ಥಳೀಯ ವಿಜಯ ಅಂಗ್ಲ ಪ್ರಾಥಮಿಕ ಶಾಲೆಯಲ್ಲಿ ೨೦೨೫ -೨೬ನೇ ಸಾಲಿನ ಶೈಕ್ಷಣಿಕ ಸಂಸತ್ ರಚನೆ ಮಾಡಲಾಯಿತು. ಮತದಾನ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಶಾಲಾ ನಾಯಕಿಯಾಗಿ ಹಮ್ನಾ ಫಾತಿಮಾ, ಉಪನಾಯಕನಾಗಿ ಮೊಹಮ್ಮದ್ ಸಲ್ಮಾನ್, ಆರೋಗ್ಯ ವಿಭಾಗದಲ್ಲಿ ದೀಪಿಕಾ, ಕ್ರೀಡಾ ವಿಭಾಗದಲ್ಲಿ ಅಫೀರ್, ಉಪ ಕ್ರೀಡಾ ವಿಭಾಗದಲ್ಲಿ ಸೈಬಾ, ಸ್ವಚ್ಛತಾ ವಿಭಾಗದಲ್ಲಿ ಸನಾ, ಸಾಂಸ್ಕೃತಿಕ ವಿಭಾಗದಲ್ಲಿ ಜುಮಾನ ಹಾಗೂ ಅದೆಶ್ ಅಪ್ಪಣ್ಣ ಅವರನ್ನು ಆಯ್ಕೆ ಮಾಡಲಾಯಿತು.*ಗೋಣಿಕೊಪ್ಪ : ಹಾತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಬಿ ನಮಿತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅಧ್ಯಕ್ಷರು, ಸರ್ಕಾರಿ ಶಾಲೆಯ ಮಕ್ಕಳು ಇಂಗ್ಲೀಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡುವುದರಿಂದ ಸರ್ಕಾರಿ ಶಾಲೆಗೆ ಮಕ್ಕಳ ದಾಖಲಾತಿ ಹೆಚ್ಚಾಗಲಿದೆ.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂಗ್ಲೀಷ್ ಮಾಧ್ಯಮ ಇಂದಿನ ಸಮಾಜದ ಮುಖ್ಯವಾಹಿನಿಗೆ ಬಹು ಅಗತ್ಯವಾಗಿದೆ. ಇದನ್ನು ಪರಿಗಣಿಸಿ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಾಲೆಗಳ ಪ್ರಾರಂಭಕ್ಕೆ ಚಿಂತನೆ ಹರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಬಡವರ್ಗದ ಮಕ್ಕಳಿಗೆ ಅನುಕೂಲವನ್ನು ಒದಗಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾ.ಪಂ. ಉಪಾಧ್ಯಕ್ಷ ಕುಲ್ಲಚಂಡ ಎಸ್. ಚಿಣ್ಣಪ್ಪ, ಸದಸ್ಯ ಕೊಕ್ಕಂಡ ಡಿ. ಗಣಪತಿ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಜ್ಮಾ ಝುಬೀನ, ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ. ಮಾಲಿನಿ, ಸಹ ಶಿಕ್ಷಕರುಗಳಾದ ಸಂಜಯ್, ಸುರೇಶ್, ಮಲ್ಲಿಕಾ, ತೆರೆಸಿಯಾ, ಫ್ಲೋರ, ಭಾರತಿ ಹಾಗೂ ನೇತ್ರಾವತಿ ಇದ್ದರು.ಚೆಯ್ಯಂಡಾಣೆ: ನಾಪೋಕ್ಲು ಬಳಿಯ ಎಡಪಾಲ ಗ್ರಾಮದ ಅಂಗನವಾಡಿಯಲ್ಲಿ ನೂತನವಾಗಿ ಎಲ್.ಕೆ.ಜಿ. ಆರಂಭ ವಾಗಿದ್ದು ಅಲ್ಲಿ ವ್ಯಾಸಂಗ ಮಾಡುವ ಪುಟಾಣಿ ವಿದ್ಯಾರ್ಥಿಗಳಿಗೆ ಅನುಗ್ರಹ ಜನ ಸೇವಾ ಚಾರಿಟೇಬಲ್ ಟ್ರಸ್ಟ್-ಕೊಡಗು, ವತಿಯಿಂದ ಆಟಿಕೆಗಳನ್ನು ಕೊಡುಗೆಯಾಗಿ ನೀಡಲಾಯಿತು.
ಅಂಗನವಾಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಮಮ್ಮದ್ ಅವರು ಪಾಲ್ಗೊಂಡು ಮಾತನಾಡಿ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ಹಲವಾರು ಸಾಮಾಜಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದ್ದು, ನಮ್ಮ ಗ್ರಾಮದ ಅಂಗನವಾಡಿಯಲ್ಲಿ ಆರಂಭವಾದ ಎಲ್.ಕೆ. ಜಿ.ಯ ಪುಟಾಣಿ ಮಕ್ಕಳಿಗೆ ಆಟಿಕೆಗಳನ್ನು ನೀಡಿದ್ದು ಶ್ಲಾಘನೀಯ. ಟ್ರಸ್ಟಿನ ಸೇವೆ ಇದೇ ರೀತಿ ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಅನುಗ್ರಹ ಜನ ಸೇವಾ ಚಾರಿಟೇಬಲ್ ಟ್ರಸ್ಟ್ನ ಇದರ ಪ್ರಧಾನ ಕಾರ್ಯದರ್ಶಿ ರಜಾಕ್ ಚೆಯ್ಯಂಡಾಣೆ,ಸಹ ಕಾರ್ಯದರ್ಶಿ ಸೈಫುದ್ದಿನ್ ಚಾಮಿಯಾಲ ಮಾತನಾಡಿ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಡಪಾಲ ಅಂಗನವಾಡಿ ಕೇಂದ್ರಕ್ಕೆ ಆಟಿಕೆಗಳನ್ನು ವಿತರಿಸಿದ್ದೇವೆ. ಎಡಪಾಲದಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭವಾಗಿದ್ದು, ಸಂತೋಷ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಕೂಡ ಆಂಗ್ಲ ಮಾಧ್ಯಮ ಆರಂಭವಾಗಲಿ ಎಂದರು. ಮುಂದಕ್ಕೂ ಕೂಡ ಪುಟಾಣಿ ಮಕ್ಕಳಿಗೆ ಬೇಕಾದ ನೆರವನ್ನು ನೀಡಲು ನಾವು ಸದಾ ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು.
ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ನ ಕೋಶಾಧಿಕಾರಿ ಹಾಗೂ ಪತ್ರಕರ್ತ ಸಿ. ಎ.ಅಶ್ರಫ್ ಮಾತನಾಡಿ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಪತ್ತಾಯಿ ಸಿಎ ಹಾಗೂ ಉಪಾಧ್ಯಕ್ಷ ರಾದ ಉಮ್ಮರ್ ಎಡಪಾಲ ಅವರ ನೇತೃತ್ವ ದಲ್ಲಿ ಅಂಗನವಾಡಿ ಕೇಂದ್ರಕ್ಕೆ ಆಟಿಕೆಗಳನ್ನು ವಿತರಿಸಿದ್ದೇವೆ. ಹಣಕಾಸಿನ ವ್ಯವಸ್ಥೆ ಇರುವವರು ದೊಡ್ಡ ದೊಡ್ಡ ಆಂಗ್ಲ ಮಾಧ್ಯಮ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆ ಗೊಳಿಸುತ್ತಾರೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕೂಡ ಅದೇ ರೀತಿಯ ಸೌಲಭ್ಯ ದೊರೆಯಲು ಇಲ್ಲಿ ಕೂಡ ಆಂಗ್ಲ ಮಾಧ್ಯಮದ ಎಲ್. ಕೆ. ಜಿ. ಆರಂಭವಾಗಿದ್ದು ತುಂಬಾ ಸಂತಸತAದಿದೆ ಎಂದರು. ಈ ಸಂದರ್ಭ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ನ ಆಡಳಿತ ಮಂಡಳಿಯ ಸದಸ್ಯ ಹಾರಿಸ್ ಕೊಂಡAಗೇರಿ, ಅಂಗನವಾಡಿ ಕಾರ್ಯಕರ್ತೆ ಆಭಿದಾ ಕೆ.ಎಂ. ರೋಹಿಣಿ ಎಚ್.ಎಂ. ಸಹಾಯಕಿ ಆಫ್ಸತ್, ಎಡಪಾಲ ಪ್ರಾಥಮಿಕ ಶಾಲೆಯ ಶಿಕ್ಷಕಿಯರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೋಹಿಣಿ ಸ್ವಾಗತಿಸಿ, ವಂದಿಸಿದರು.ಕೂಡಿಗೆ: ಮೈಸೂರಿನ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾಭಿವೃದ್ಧಿ ಸಮಿತಿಯ ಸಹಕಾರದೊಂದಿಗೆ ಉಚಿತವಾಗಿ ಬರೆಯುವ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಸೇವಾ ಭಾರತಿ ಟ್ರಸ್ಟ್ನ ಸಂಯೋಜಕ ಡಾ. ಅಚ್ಯುತರಾವ್, ತಮ್ಮ ಸಂಸ್ಥೆಯ ವತಿಯಿಂದ ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಸಾಧನೆಯ ಸಲಕರಣೆಗಳನ್ನು ನೀಡುತ್ತಾ ಅವರ ಕಲಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ.
ಮಕ್ಕಳಿಗೆ ನೋಟ್ ಪುಸ್ತಕಗಳು ಸೇರಿದಂತೆ ಲೇಖನ ಸಾಮಗ್ರಿಗಳು ಹಾಗೂ ಮಕ್ಕಳ ಕಲಿಕೆಗೆ ಬೇಕಾದ ಪೂರಕ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಗುರುಗಳು ಕಲಿಸುವ ಪಾಠ- ಪ್ರವಚನಗಳನ್ನು ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಕೂಡುಮAಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಸೇವಾ ಭಾರತಿ ಟ್ರಸ್ಟ್, ಸರ್ಕಾರಿ ಶಾಲಾ ಮಕ್ಕಳಿಗೆ ನೆರವು ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು. ಶಾಲಾ ಮುಖ್ಯ ಶಿಕ್ಷಕಿ ಕೆ.ಡಿ. ತಾರಾಮಣಿ ಮಾತನಾಡಿ, ಸೇವಾ ಭಾರತಿ ಟ್ರಸ್ಟ್ ನವರು ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳ ಬಗ್ಗೆ ಹೊಂದಿರುವ ಕಾಳಜಿಯನ್ನು ಪ್ರಶಂಶಿಸಿದರು.
ಟ್ರಸ್ಟ್ನ ಪ್ರಮುಖರಾದ ಕೃಷ್ಣಕುಮಾರ್ ಗುರೂಜಿ, ವಿದ್ಯಾರ್ಥಿಗಳಿಗೆ ಧ್ಯಾನದ ಮಹತ್ವ ಕುರಿತು ತಿಳಿಸಿದರು. ಟ್ರಸ್ಟ್ನ ಸದಸ್ಯರಾದ ವೆಂಕಟೇಶ್ ಬಾಬು, ರಾಧಾ ವೆಂಕಟೇಶ್, ಶಾಲಾ ಶಿಕ್ಷಕರಾದ ಟಿ.ಎಸ್. ವಿನೋದ, ಎಸ್.ಆರ್. ಸುನಿತ, ಹೆಚ್.ವಿ. ಲತಾಮಣಿ, ಎಸ್.ಪಿ. ಶ್ವೇತ ಹಾಗೂ ಮಹಾದೇವ ಕುಮಾರ ಇದ್ದರು.ಸುಂಟಿಕೊಪ್ಪ: ಕಂಬಿಬಾಣೆ ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಯಿತು.
ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆರ್.ಆರ್. ಮೋಹನ್ ಅವರು ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೬೬ ಮಕ್ಕಳಿಗೆ ಶೂ-ಸಾಕ್ಸ್ ಅನ್ನು ವಿತರಿಸಿ ಮಾತನಾಡಿದರು.
ಸುಂಟಿಕೊಪ್ಪ: ಕಂಬಿಬಾಣೆ ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಯಿತು.
ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆರ್.ಆರ್. ಮೋಹನ್ ಅವರು ಅತ್ತೂರು ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೬೬ ಮಕ್ಕಳಿಗೆ ಶೂ-ಸಾಕ್ಸ್ ಅನ್ನು ವಿತರಿಸಿ ಮಾತನಾಡಿದರು.
ಮಡಿಕೇರಿ: ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ನಾಯಕರುಗಳು ಹಾಗೂ ತರಗತಿ ಪ್ರತಿನಿಧಿಗಳ ಚುನಾವಣೆಯನ್ನು ನಡೆಸಲಾಯಿತು. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಿಂದ ತಲಾ ಇಬ್ಬರು ವಿದ್ಯಾರ್ಥಿ ಗಳು ತರಗತಿ ಪ್ರತಿನಿಧಿಗಳಾಗಿ ಆಯ್ಕೆಗೊಂಡಿದ್ದು, ಕಾಲೇಜಿನ ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಬಿ.ಎಸ್, ಜಂಟಿ ಕಾರ್ಯದರ್ಶಿಗಳಾಗಿ ಆದಿತ್ಯ ಹೆಚ್.ಎನ್. ಹಾಗೂ ಕಾವ್ಯ ಕೆ.ಎಸ್., ಕ್ರೀಡಾ ಕಾರ್ಯದರ್ಶಿಯಾಗಿ ಪುನೀತ್ ಪಿ.ಎಂ. ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಗಳಾಗಿ ಅಮೂಲ್ಯ ಟಿ.ಎಸ್. ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.ಸರಕಾರವು ಪ್ರತಿಯೊಬ್ಬ ಮಗು ಶಿಕ್ಷಣವನ್ನು ಪಡಯಲೇ ಬೇಕೆಂಬ ಮುಖ್ಯ ಉದ್ದೇಶವನ್ನು ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಬಳಸಿಕೊಳ್ಳುವ ಮೂಲಕ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ನಯನ ಹಾಗೂ ಸಹಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಐಗೂರು: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಟಾಟಾ ಕಾಫಿ ಸಂಸ್ಥೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಚಾಲನೆ ನೀಡಲಾಯಿತು.
ಸ್ಥಳೀಯ ಜಂಬೂರು ಗ್ರೂಪಿನ ಕಿಬ್ರಿಬೆಟ್ಟ ವಿಭಾಗದ ಆಡಳಿತ ಮಂಡಳಿಯವರು ಸಿಎಸ್ಆರ್ ಅನುದಾನದಿಂದ ದೊರಕಿದ ಹಣದಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಹಣ ಮಂಜೂರು ಮಾಡಿದರು. ಮಡಿಕೇರಿ: ಮೂರ್ನಾಡು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಯಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಅವರು ವಹಿಸಿದ್ದರು. ಸದಸ್ಯರುಗಳಾದ ರಾಮಮೂರ್ತಿ, ಈರಮಂಡ ಸೋಮಣ್ಣ ಅವರುಗಳು ಈ ಸಂದರ್ಭ ಹಾಜರಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ರೇಷ್ಮಾ ಸುಬ್ಬಯ್ಯ ಅವರು ಕಾರ್ಯಕ್ರಮದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಲೀನಾ ನಿರೂಪಿಸಿದರೆ, ಹರ್ಷಿತ ಸ್ವಾಗತಿಸಿ ಮೇಘಶ್ರೀ ವಂದಿಸಿದರು.
ಮಡಿಕೇರಿ: ಎಂ ಬಾಡಗ -೧ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾಂತರೂ ಮೂರ್ನಾಡು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಎಲ್.ಕೆ.ಜಿ. ಪ್ರಾರಂಭೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ನೆರವೇರಿತು.
ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸವಿತಾ ಕೀರ್ತನ್ ಮಾತನಾಡಿ, ಎದೆಹಾಲಿನ ಮಹತ್ವದ ಬಗ್ಗೆ ತಿಳಿಸಿದರು. ೨೦೨೫ರ ಸ್ತನ್ಯಪಾನ ಸಪ್ತಾಹದ ಘೋಷವಾಕ್ಯ "ಸ್ತನ್ಯಪಾನಕ್ಕೆ ಆದ್ಯತೆ ನೀಡಿ ಸುಸ್ಥಿರ ಬೆಂಬಲ ವ್ಯವಸ್ಥೆಗಳನ್ನು ರಚಿಸಿ "ಎಂಬುದನ್ನು ತಿಳಿಸಿ ಈ ಘೋಷವಾಕ್ಯವು ತಾಯಂದಿರಿಗೆ ಹಾಲುಣಿಸಲು ಬೆಂಬಲಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತದೆ ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಗಸ್ಟ್ ಒಂದರಿAದ ಏಳರವರೆಗೆ ಸ್ತನ್ಯಪಾನ ಸಪ್ತಾಹವನ್ನು ಎಲ್ಲಾ ಅಂಗನವಾಡಿಗಳಲ್ಲಿ ಆಚರಿಸಿ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯ ನಡೆಯುವುದು ಎಂದು ತಿಳಿಸಿದರು.
ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಸೌಲಭ್ಯಗಳ ಸದುಪಯೋಗ ಮಕ್ಕಳು ಪಡೆಯಲು ತಂದೆ ತಾಯಂದಿರು ಪ್ರೋತ್ಸಾಹಿಸಿ ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು ತಿಳಿಸಿದರು. ಉಪಾಧ್ಯಕ್ಷರಾದ ರೇಖಾ ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ಫಲಾಪೇಕ್ಷೆ ಇಲ್ಲದೆ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಇವರಿಗೆ ಗ್ರಾಮ ಪಂಚಾಯಿತಿ ಮತ್ತು ಸಮುದಾಯದಿಂದ ಮತ್ತಷ್ಟು ಪ್ರೋತ್ಸಾಹವನ್ನು ನೀಡಬೇಕು ಎಂದು ತಿಳಿಸಿದರು.
ಪಂಚಾಯಿತಿ ಸದಸ್ಯರಾದ ಸೌಮ್ಯ ಕಾವೇರಪ್ಪ, ವಿಜಯಲಕ್ಷಿö್ಮ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಸಂಘದ ಜಿಲ್ಲಾಧ್ಯಕ್ಷರಾದ ಸುಮಿತ್ರ ಅವರು ಹಾಜರಿದ್ದರು. ಮಾಜಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಪವಿತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ವಿವರವಾಗಿ ತಿಳಿಸಿದರು.
ಸನ್ಮಾನ : ಕೇಂದ್ರದ ಅಭಿವೃದ್ಧಿಗೆ ಉತ್ತಮ ಸಲಹೆ, ಸಹಕಾರ, ಉತ್ತಮ ಮಾರ್ಗದರ್ಶನ ನೀಡಿರುವುದಕ್ಕಾಗಿ ಬಾಲವಿಕಾಸ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ, ಉಪಾಧ್ಯಕ್ಷರಾದ ರೇಖಾ, ಸದಸ್ಯರಾದ ನಿಂಗಪ್ಪ, ಮೀನಾಕ್ಷಿ ದೇವಯ್ಯ, ಸೌಮ್ಯ ಕಾವೇರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್, ಕಲಾವಿದ ದರ್ಶನ್ ಅವರನ್ನು ಸನ್ಮಾನವನ್ನು ಮಾಡಲಾಯಿತು.ಮಡಿಕೇರಿ: ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ರಾಗಿ ಸೇವೆ ಸಲ್ಲಿಸುತ್ತಿದ್ದು ನಿವೃತ್ತರಾದ ದಾಯನ ರಾಮಕೃಷ್ಣ ಅವರನ್ನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.
ತಾವು ಕಲಿತ ಸಂಸ್ಥೆಯಲ್ಲೇ ಶಿಕ್ಷಕರಾಗಿ, ಉಪನ್ಯಾಸಕರಾಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ರಾಮಕೃಷ್ಣ ಅವರನ್ನು ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕೊಡಗಿನಲ್ಲಿ ಸಾಕ್ಷರ ಕಾವೇರಿ ಅಭಿಯಾನದ ನಿರ್ದೇಶಕರಾಗಿ ಕೆಲಸ ಮಾಡಿದ್ದ ನಾರಾಯಣ ಗೌಡ ಮಾತನಾಡಿ, ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಉನ್ನತ ಸ್ಥಾನಕ್ಕೆ ಏರಬಹುದು ಎನ್ನುವುದು ತಪ್ಪು ಕಲ್ಪನೆ. ಕನ್ನಡ ಮಾಧ್ಯಮದಲ್ಲಿ ಓದಿದವರೂ ಸಾಧನೆ ಮಾಡಬಹುದು ಎನ್ನುವುದಕ್ಕೆ ರಾಮಕೃಷ್ಣ ಅವರೇ ಪ್ರತ್ಯಕ್ಷ ಸಾಕ್ಷಿ.
ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದ್ದೇ ಇರುತ್ತದೆ. ಪರಿಹಾರ ಇಲ್ಲದ ಸಮಸ್ಯೆ ಸಮಸ್ಯೆಯೇ ಅಲ್ಲ. ಇದನ್ನು ಅರಿತುಕೊಂಡು ಜೀವನ ನಡೆಸಿದರೆ ಯಾವುದೂ ಕಷ್ಟವಲ್ಲ ಎಂದರು. ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಅನುದಾನಿತ ವಿದ್ಯಾಸಂಸ್ಥೆಗಳ ನಿರ್ವಹಣೆ ಸವಾಲಾಗಿರುವ ಇಂದಿನ ದಿನಗಳಲ್ಲಿ ಒಂದು ಸಂಸ್ಥೆಯನ್ನು ಉತ್ತಮ ನಾಯಕತ್ವದಲ್ಲಿ ಮುನ್ನಡೆಸಿದ ಹೆಗ್ಗಳಿಕೆ ರಾಮಕೃಷ್ಣ ಅವರದ್ದು. ಅನುದಾನಿತ ವಿದ್ಯಾಸಂಸ್ಥೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೆಯೂ ಇದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಾಯನ ರಾಮಕೃಷ್ಣ, ಅನುದಾನಿತ ವಿದ್ಯಾಸಂಸ್ಥೆಯಾದ ಅರುಣ ವಿದ್ಯಾಸಂಸ್ಥೆ ಸಂಕಷ್ಟದಲ್ಲಿದೆ. ಹಿರಿಯರು ಕಟ್ಟಿಬೆಳೆಸಿದ ಈ ಸಂಸ್ಥೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೆಯೂ ಇದೆ.
ಹಿರಿಯ ವಿದ್ಯಾರ್ಥಿಗಳು ಹೆಚ್ಚು ಮುತುವರ್ಜಿ ವಹಿಸಿ ಈ ಸಂಸ್ಥೆಯನ್ನು ಉಳಿಸಲು ಪಣತೊಡಬೇಕು ಎಂದರು. ಭಾಗಮಂಡಲ ಶ್ರೀ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ. ದಿವಾಕರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಲೋಕೇಶ್, ಶಿಕ್ಷಕ ಪರಮೇಶ್, ನಿವೃತ್ತ ಶಿಕ್ಷಕ ಸತೀಶ್ ಕುಮಾರ್, ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರಾಮಕೃಷ್ಣ ಅವರ ಸೇವೆ ಬಗ್ಗೆ ಮಾತನಾಡಿದರು.
ಅರುಣ ಪಿಯು ಕಾಲೇಜು ನೂತನ ಪ್ರಾಂಶುಪಾಲ ಕೆ.ಆರ್. ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮಿಳಾ, ಸಂಸ್ಥೆಯ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ರಾಮಕೃಷ್ಣ ಅವರ ಪತ್ನಿ, ಮಕ್ಕಳು ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಇದ್ದರು.