ಸೋಮವಾರಪೇಟೆ, ಆ. ೬: ಇಲ್ಲಿನ ರೋಟರಿ ಸೋಮವಾರಪೇಟೆ ಹಿಲ್ಸ್ ವತಿಯಿಂದ ಪಟ್ಟಣ ಸಮೀಪದ ಕರ್ಕಳ್ಳಿ ಗ್ರಾಮದ ನಿವಾಸಿ, ಹಲವಾರು ಪ್ರಶಸ್ತಿಗಳನ್ನು ಗಳಿಸಿರುವ, ಪ್ರಗತಿಪರ ಕೃಷಿಕರಾದ ನಿರ್ಮಲಾ ಜಯಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಇಲ್ಲಿನ ರೋಟರಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ ಮತ್ತು ಔಷಧೀಯ ಸಸ್ಯಗಳ ಬೇಸಾಯದಲ್ಲಿ ಸಾಧನೆ ಮಾಡುತ್ತಿರುವ ನಿರ್ಮಲ ಅವರ ಕೃಷಿ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷೆ ವೀಣಾ ಮನೋಹರ್, ಕಾರ್ಯದರ್ಶಿ ಡಿ.ಪಿ. ರಮೇಶ್, ವಲಯ ಸೇನಾನಿ ಡಾ. ರಾಕೇಶ್ ಪಟೇಲ್ ಸೇರಿದಂತೆ ರೋಟರಿ ಸದಸ್ಯರು ಉಪಸ್ಥಿತರಿದ್ದರು.