ಮಡಿಕೇರಿ, ಆ. ೬: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ನೀಡಲಾಗುವ ೨೦೨೫ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಗ್ರಂಥಪಾಲಕಿ ಡಾ.

ವಿಜಯಲತ ಸಿ ಅವರು ಭಾಜನರಾಗಿದ್ದಾರೆ.

ಗ್ರಂಥಾಲಯದ ಡಿಜಿಟಲೀಕರಣ, ಇ-ಬುಕ್ ವ್ಯವಸ್ಥೆ, ಆನ್ಲೆöÊನ್ ಕಾಟ್ ಲಾಗ್, ಇ-ಲರ್ನಿಂಗ್ ಹಾಗೂ ವಿದ್ಯಾರ್ಥಿಗಳಿಗೆ ದೈನಂದಿನ ಬಳಕೆಗೆ ಸುಲಭವಾದ ವ್ಯವಸ್ಥೆಗಳನ್ನು ಹಾಗೂ ವಿದ್ಯಾರ್ಥಿ ಗಳಲ್ಲಿ ಓದಿನ ಮಹತ್ವವನ್ನು ಅರ್ಥ ಮಾಡಿಸಲು ಕಾರ್ಯಾಗಾರ ಹೀಗೆ ಶಿಕ್ಷಣಕ್ಕೆ ಬೇಕಾದ ಸಾಕಷ್ಟು ಸಂಪನ್ಮೂಲಗಳನ್ನು ವಿದ್ಯಾರ್ಥಿ ಓದುಗರಿಗೆ ಒದಗಿಸುವ ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಇತ್ತೀಚೆಗೆ ಮೂಡ ಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರೇರಣಾ ದಿವಸ್ ೨೦೨೫ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಶಸ್ತಿ ಪ್ರದಾನ ಮಾಡಿದರು.