ಐಗೂರು, ಆ. ೬: ಮಾದಾಪುರದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಿ.ಸಿ. ಮಂಜಯ್ಯ ಅವರನ್ನು ಶಾಲಾ ಅಧ್ಯಾಪಕ ವೃಂದದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ. ಎಂ.ಸಿ. ಅಧ್ಯಕ್ಷ ಮನು ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಲತೀಫ್, ಕ್ಲಸ್ಟರ್ ಕೇಂದ್ರಕ್ಕೆ ಒಳಪಡುವ ಎಲ್ಲಾ ಮುಖ್ಯ ಶಿಕ್ಷಕರು, ಶಿಕ್ಷಕ ಮಂಜಯ್ಯ ಅವರ ಕುಟುಂಬಸ್ಥರು, ಶಾಲಾ ಅಧ್ಯಾಪಕ ವೃಂದ ಮತ್ತು ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.