ಸುಂಟಿಕೊಪ್ಪ, ಆ. ೯: ಸಂತ ಮೇರಿ ಶಿಕ್ಷಣ ಸಂಸ್ಥೆಗಳ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ ಸಂಸ್ಥೆಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಟ್ಟಗೇರಿ ಸಮೂಹ ಕಾಫಿ ತೋಟಗಳ ಮಾಲೀಕ ಮತ್ತು ಉದ್ಯಮಿ ದೊಡ್ಡಮನೆ ವಿಶಾಲ್ ಶಿವಪ್ಪ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಭವ್ಯ ಭವಿಷ್ಯ ಮತ್ತು ಬದುಕಿಗೆ ಶಿಕ್ಷಣ ಮೂಲ ಆಧಾರವಾಗಿರುತ್ತದೆ. ಪಠ್ಯ ಶಿಕ್ಷಣ ಮಾತ್ರವಲ್ಲದೆ ಕ್ರೀಡೆಯೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ. ಏಕಾಗ್ರತೆ ಹಾಗೂ ಕಠಿಣ ಪರಿಶ್ರಮವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಆಸೆ ಅಮಿಷಗಳಿಗೆ ಬಲಿಯಾಗದೆ ನಿರ್ದಿಷ್ಟ ಗುರಿಯೆಡೆಗೆ ಸಾಗಿದರೆ ಯಶಸು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಮೇರಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ವಿಜಯಕುಮಾರ್ ವಹಿಸಿದ್ದರು. ಅತಿಥಿಗಳಾಗಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಜೋವಿಟಾವಾಸ್ ಮತ್ತು ಸಂತ ಮೇರಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಸೆಲ್ವರಾಜ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮೊದಲಿಗೆ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಸ್ತುಬದ್ಧ ಪಥಸಂಚಲನ ಮತ್ತು ಅತಿಥಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಿದರು.