ವೀರಾಜಪೇಟೆ, ಆ. ೯: ವೀರಾಜಪೇಟೆಯ ಕೊಟ್ಟೋಳಿ ಗ್ರಾಮದಲ್ಲಿ ಇತ್ತೀಚೆಗೆ ರೂ. ೮.೫ ಲಕ್ಷದಲ್ಲಿ ನಿರ್ಮಾಣವಾದ ನೂತನ ಕಾಂಕ್ರಿಟ್ ರಸ್ತೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆಫ್ರಿ ಉತ್ತಪ್ಪ, ಸದಸ್ಯರಾದ ಮಾಳೆಟೀರ ಪ್ರಶಾಂತ್, ಬೂತ್ ಅಧ್ಯಕ್ಷ ಆಲಿ, ಪಂಚಾಯಿತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಘಟಕದ ಅಧ್ಯಕ್ಷ ರಫೀಕ್, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.