ಸಿದ್ದಾಪುರ, ಆ. ೯: ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದ್ದು, ಗ್ರಾಮಸ್ಥರು ಕಾಡಾನೆಗಳನ್ನು ಕಾಡಿಗಟ್ಟಲು ಒತ್ತಾಯಿಸಿದ್ದ ಹಿನ್ನೆಲೆ ಕಾರ್ಯಾಚರಣೆ ಕೈಗೊಂಡ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಹಾಗೂ ಖಾಸಗಿ ಸಂಸ್ಥೆಯ ಕಾಫಿ ತೋಟಗಳಲ್ಲಿ ಮಾರಿಯಾನೆಗಳು ಸೇರಿದಂತೆ ೩೫ಕ್ಕೂ ಅಧಿಕ ಕಾಡಾನೆಗಳು ಕಂಡುಬAದಿದೆ ಎಂದು ಕಾರ್ಯಾಚರಣೆ ತಂಡದ ಸಿಬ್ಬಂದಿ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಸರಿನ ನಡುವೆ ಕಾರ್ಯಾಚರಣೆ ನಡೆಸಿ ಅವುಗಳನ್ನು ಕಾಡಿಗೆ ಓಡಿಸಿದರು. ಕಾರ್ಯಚರಣೆ ಸಂದರ್ಭ ಕೆಲವು ಕಾಡಾನೆಗಳು ಕಾಫಿ ತೋಟದೊಳಗಿನಿಂದ ಕಾಡಿಗೆ ತರಲು ಹಿಂದೇಟು ಹಾಕಿದವು. ಅಲ್ಲದೆ ಕೆಲವು ಕಾಡಾನೆಗಳು ಮರಿಯಾನೆಗಳೊಂದಿಗೆ ಕಾಫಿ ತೋಟದಲ್ಲೇ ಉಳಿದುಕೊಂಡಿವೆ. ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿ ಆರ್‌ಆರ್‌ಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. -ವಾಸು