ನಾಪೋಕ್ಲು, ಆ. ೯: ಸಮೀಪದ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೨೦೨೫- ೨೬ನೇ ಶೈಕ್ಷಣಿಕ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಮುದಾಯ ರೋಟರಿ ಮಿಸ್ಟಿ ಹಿಲ್ಸ್ ಸ್ಥಾಪಕಾಧ್ಯಕ್ಷ ಬಿ.ಜಿ. ಅನಂತಶಯನ, ಸೇವೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಹೇಳಿದರು.

ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದೆರ್ ಮಾತನಾಡಿ, ಇಂಟರಾಕ್ಟ್ ಕ್ಲಬ್ ರೋಟರಿ ಇಂಟರ್ ನ್ಯಾಷನಲ್‌ನ ತತ್ವಗಳಿಂದ ಮಾರ್ಗದರ್ಶನ ಪಡೆದು ಅರ್ಥಪೂರ್ಣ ಸೇವೆ, ನಾಯಕತ್ವ ಅಭಿವೃದ್ಧಿಯೊಂದಿಗೆ ಶಾಲೆಗಳಲ್ಲೂ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಪದಾಧಿಕಾರಿಗಳಾದ ವಸಂತ್ ಕುಮಾರ್, ಕೆ.ಜಿ ಹರೀಶ್, ಸಂಸ್ಥೆಯ ಮುಖ್ಯಸ್ಥರಾದ ಶಾಹಿದ್ ಆಲಿ, ಮುಖ್ಯ ಶಿಕ್ಷಕಿ ಎಂ.ಎA. ಕವಿತಾ, ಹಾಗೂ ಎಂ.ಜಿ. ಗಗನ್ ಉಪಸ್ಥಿತರಿದ್ದರು.