ಮಡಿಕೇರಿ, ಆ. ೯: ೨೦೨೫-೨೬ ನೇ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯನ್ನು ಇಲಾಖಾ ವತಿಯಿಂದ ಏರ್ಪಡಿಸಲಾಗಿದೆ.
ಮಡಿಕೇರಿ ತಾಲೂಕಿಗೆ ತಾ. ೧೮ ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ, ಸಾಯಿ ಹಾಕಿ ಟರ್ಫ್, ಮಡಿಕೇರಿ. ಪೊನ್ನಂಪೇಟೆ ತಾಲೂಕಿಗೆ ತಾ. ೧೯ ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ.
ವೀರಾಜಪೇಟೆ ತಾಲೂಕಿಗೆ ತಾ. ೨೦ ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ.
ಕುಶಾಲನಗರ ತಾಲೂಕಿಗೆ ತಾ. ೨೧ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ತಾಲೂಕಿಗೆ ತಾ. ೨೨ ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ ಇಲ್ಲಿ ಕ್ರೀಡಾಕೂಟ ನಡೆಯಲಿದೆ. ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ತಾ. ೩೦ ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮತ್ತು ಕೂಡಿಗೆ ಕ್ರೀಡಾ ಶಾಲೆ ಹಾಗೂ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಡಿಕೇರಿ ತಾಲೂಕು -ಮಹಾಬಲ - ೯೯೮೦೮೮೭೪೯೯, ಮನು - ೯೪೮೦೦೩೨೭೨೧, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವೆಂಕಟೇಶ್ - ೯೮೪೪೩೨೬೦೦೭, ಹಾಗೂ ಮಂಜುನಾಥ್ -೯೩೪೨೫೬೩೦೧೪, ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು; ಸುಬ್ಬಯ್ಯ - ೮೧೯೭೭೯೦೩೫೦ ಹಾಗೂ ಗಣಪತಿ - ೮೯೫೧೨೮೭೩೦೧ ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕÀ ವಿ.ಟಿ. ವಿಸ್ಮಯಿ ಅವರು ತಿಳಿಸಿದ್ದಾರೆ.