ಮಡಿಕೇರಿ, ಆ. ೧೨: ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು.

ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊAಡವು.

ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿವಿಧ ಇಲಾಖೆ ಮೂಲಕ ನಡೆಯಲಿವೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರೂ ತಮ್ಮ ಸೆಲ್ಫಿಗಳನ್ನು hಣಣಠಿs://hಚಿಡಿgಚಿಡಿಣiಡಿಚಿಟಿgಚಿ.ಛಿom ನಲ್ಲಿ ಹಂಚಿಕೊಳ್ಳುವAತೆ ಕೋರಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮದಂತೆ ವೈವಿಧ್ಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ವೆಂಕಟ್ ರಾಜಾ ಮಾಹಿತಿ ನೀಡಿದರು.

ಶಾಲಾ-ಕಾಲೇಜುಗಳಲ್ಲಿ, ವಸತಿ ಶಾಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಈಗಾಗಲೇ ಶಾಲಾ-ಕಾಲೇಜು ಹಾಗೂ ಐತಿಹಾಸಿಕ ಸ್ಥಳಗಳಲ್ಲಿ

(ಮೊದಲ ಪುಟದಿಂದ) ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸು ವಂತೆ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತಾ.ಪಂ. ಇಓ ಶೇಖರ್ ಗ್ರಾ.ಪಂ. ಮಟ್ಟದಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್, ೧೩ ರಿಂದ ೧೫ ರವರೆಗೆ ಕೊಡಗು ಜಿಲ್ಲೆಯಾದ್ಯಂತ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಸರ್ಕಾರವು ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯ ದೊಂದಿಗೆ ಆಗಸ್ಟ್ ೧೩ ರಿಂದ ೧೫ ರವರೆಗೆ ದೇಶದ ಪ್ರತಿಮನೆ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ನಮ್ಮ ರಾಷ್ಟçಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿದೆ. ಅದರಂತೆ ಈ ಸಂದರ್ಭದಲ್ಲಿ ಎಲ್ಲರೂ ಆಗಸ್ಟ್ ೧೩ ರಿಂದ ೧೫ರವರೆಗೆ ಮನೆಗಳ ಮೇಲೆ ತ್ರಿವರ್ಣ ಧ್ವಜಹಾರಿಸುವ ಮೂಲಕ ಈ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಕೋರಿದೆ.