ಮಡಿಕೇರಿ, ಆ. ೧೨: ಸ್ವಾತಂತ್ರೊö್ಯÃತ್ಸವ ಪ್ರಯುಕ್ತ ಮಡಿಕೇರಿ ನಗರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ತಿರಂಗ ಯಾತ್ರೆ ನಡೆಯಿತು.

ಯುವಪೀಳಿಗೆಯಲ್ಲಿ ದೇಶ ಭಕ್ತಿ ಮೂಡಿಸುವ ಸಲುವಾಗಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಆರಂಭಗೊAಡ ಬೈಕ್ ಜಾಥಾ ಮುಖ್ಯಬೀದಿಗಳಲ್ಲಿ ಸಾಗಿ ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿ ಮುಕ್ತಾಯಗೊಂಡಿತು. ಜಾಥಾದ ವೇಳೆ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಕಾರ್ಯಕರ್ತರು ಸಾಗಿದರು.

ಈ ಸಂದರ್ಭ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ನಗರಾಧ್ಯಕ್ಷ ಪಾಂಡಿರ ಪೂಣಚ್ಚ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಲಾವತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ ಮೊಗೇರ, ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್, ಮಡಿಕೇರಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಸೇರಿದಂತೆ ಇನ್ನಿತರರು ಹಾಜರಿದ್ದರು.