ಸಿದ್ದಾಪುರ, ಆ. ೧೩: ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿ ಜಯಲಕ್ಷಿö್ಮ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿಜು ಅವರು ಅವಿರೋಧವಾಗಿ ಆಯ್ಕೆಗೊಂಡರು. ಚೆನ್ನಯ್ಯನ.ಕೋಟೆ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಯಾಗಿ ವೀರಾಜಪೇಟೆ ತಾಲೂಕಿನ ನೂತನ ತಹಶೀಲ್ದಾರ್ ಪಡಿಕ್ಕಲ್ ಪ್ರವೀಣ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.