ವೀರಾಜಪೇಟೆ, ಆ. ೧೩: ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಹಿಂದೂ ಜಾಗರಣ ವೇದಿಕೆಯ ತಾಲೂಕು ಘಟಕದ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪಟ್ಟಣದಲ್ಲಿ ನಡೆಯಿತು.

ವೀರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದ ಬಳಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವದರೊಂದಿಗೆ ಪಂಜಿನ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಪುಷ್ಪ ನಮನ ಸಲ್ಲಿಸಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು..

ಪಟ್ಟಣದ ತೆಲುಗರ ಬೀದಿಯಲ್ಲಿನ ಮಾರಿಯಮ್ಮ ದೇವಾಲಯದಿಂದ ಆರಂಭಗೊAಡ ಮೆರವಣಿಗೆಯು ಜೈನರ ಬೀದಿ, ಎಫ್.ಎಂ.ಸಿ ರಸ್ತೆ, ಗಡಿಯಾರ ಕಂಬದ ಮಾರ್ಗವಾಗಿ ಖಾಸಗಿ ಬಸ್ ನಿಲ್ದಾಣ, ಮಾಂಸದ ಮಾರುಕಟ್ಟೆ, ಕೆ.ಎಸ್.ಆರ್.ಸಿ ರಸ್ತೆ ಮಾರ್ಗವಾಗಿ ದೊಡ್ಡಟ್ಟಿ ಚೌಕಿ ಮೂಲಕ ಮಹಿಳಾ ಸಮಾಜದತ್ತ ಸಾಗಿತು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಿಂದ ಸಾಕಷ್ಟು ಕಾರ್ಯಕರ್ತರು ಆಗಮಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರಮುಖ ಬೀದಿಗಳಲ್ಲಿ ಕಾರ್ಯಕರ್ತರು ಭಾರತ ಮಾತೆ, ಶ್ರೀರಾಮನಿಗೆ ಜಯಘೋಷಣೆಗಳನ್ನು ಮೆರವಣಿಗೆಯುದ್ಧಕ್ಕೂ ಮೊಳಗಿಸಿದರು.

ಮೆರವಣಿಗೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಈ ಸಂದರ್ಭ ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಯೋಜಕ ಅನಿಲ್ ಸಿದ್ದಾಪುರ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಇದ್ದರು.