ಸೋಮವಾರಪೇಟೆ, ಆ. ೧೩: ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು.

ರಾಜ್ಯ ವಿಧಾನಸಭಾ ಅಧಿವೇಶನ ನಡುವೆಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಟ್ಟ ಶಾಸಕರು, ಪ್ರಸ್ತುತ ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ವಿವರಿಸಿದರು. ಜಿಲ್ಲೆಯ ರೈತರು, ಕೃಷಿಕರ ಆತಂಕವನ್ನು ಬಗೆಹರಿಸಲು ತಾನು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದು, ಕೆಲವೊಂದು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಕಾನೂನಾತ್ಮಕವಾಗಿಯೇ ಬಗೆಹರಿಸಬೇಕಾಗುತ್ತದೆ. ಈ ಎಲ್ಲಾ ಅಂಶಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದು ಸಮಸ್ಯೆ ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ ಎಂದು ಡಾ. ಮಂತರ್ ಗೌಡ ತಿಳಿಸಿದ್ದಾರೆ. ಇದೇ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬAಧಿಸಿದAತೆಯೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ಶಾಸಕರು ತಿಳಿಸಿದ್ದಾರೆ.