ಮಡಿಕೇರಿ, ಆ. ೧೩: ಮಡಿಕೇರಿ ಕೊಡಗು ವಿದ್ಯಾಲಯದಲ್ಲಿ ತಾ.೧೬ ರಂದು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ ೧೦ ಗಂಟೆಗೆ ವಿದ್ಯಾಸಂಸ್ಥೆಯ ಬಿ.ಕೆ ಸುಬ್ಬಯ್ಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.