ಪಾಲೆಮಾಡಿನಲ್ಲಿ ಬುಡಕಟ್ಟು ದಿನಾಚರಣೆ

ಮಡಿಕೇರಿ, ಆ. ೧೩: ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವೊಂದಿದ್ದರೆ ಸಾಕು ಎನ್ನುವ ಮನೋಭಾವ ಬೆಳೆಯುತ್ತಿದೆ. ಇದು ಸರಿಯಲ್ಲ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಿದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಪಾಲೆಮಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೆ ಶಿಕ್ಷಣದ ಅಗತ್ಯವಿದೆ, ಆದರೆ ಶಿಕ್ಷಣದ ಜೊತೆ ಜೊತೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಬೆಳೆಸಿಕೊಂಡು ಹೋಗಬೇಕು. ಬುಡಕಟ್ಟು ಜನರು ಈ ಪರಿಸರದ ಅವಿಭಾಜ್ಯ ಅಂಗವಾಗಿದ್ದಾರೆ, ಅವರಿದ್ದರೆ ಪರಿಸರ ಉಳಿಯುತ್ತದೆ. ನಾವು ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊಡಗಿನ ಗದ್ದೆ ಮತ್ತು ತೋಟಗಳು ಇಂದು ಮರೆಯಾಗುತ್ತಿದ್ದು, ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಸುತ್ತಮುತ್ತಲ ಹಸಿರ ಪರಿಸರ ಅಭಿವೃದ್ಧಿಯ ಹೆಸರಿನಲ್ಲಿ ನಾಶವಾಗುತ್ತಿದೆ.

ಇಂದು ಪರಿಸರ ನಾಶವಾದರೆ ಮುಂದೊAದು ದಿನ ಮನುಷ್ಯರು ಕೂಡ ನಾಶವಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು.

ಮುಖ್ಯ ಭಾಷಣ ಮಾಡಿದ ಚೊಟ್ಟೆಪಾರೆ ಹಾಡಿಯ ಬುಡಕಟ್ಟು ಜನಾಂಗದ ಮುಖಂಡ ಜೆ.ಕೆ.ರಾಮು, ಇಂದು ಆದಿವಾಸಿಗಳು ಕೂಡ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಆದರೆ ಬುಡಕಟ್ಟು ಸಂಪ್ರದಾಯವನ್ನು ಕಡೆಗಣಿಸದೆ ಆಚರಿಸಿಕೊಂಡು ಹೋಗುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸುಮಾರು ೫೨ ಆದಿವಾಸಿ ಮೂಲ ಸಮುದಾಯಗಳಿವೆ. ಈ ಸಮುದಾಯಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯಾವುದೇ ಕಾರಣಕ್ಕೂ ಬುಡಕಟ್ಟು ಜನಾಂಗ ನಶಿಸಿ ಹೋಗಬಾರದು. ಸಾಮಾಜಿಕ ಪಿಡುಗುಗಳ ದುಷ್ಪರಿಣಾಮದ ಕುರಿತು ಆದಿವಾಸಿಗಳಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೆರಾ ಅವರು ಮಾತನಾಡಿ ಬುಡಕಟ್ಟು ಜನರು ಶಿಕ್ಷಣಕ್ಕೆ ಮಹತ್ವ ನೀಡಬೇಕು, ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಹೊದ್ದೂರು ಗ್ರಾ.ಪಂ. ಅಧ್ಯಕ್ಷÀ ಹೆಚ್.ಎ.ಹಂಸ ಮಾತನಾಡಿ, ಆದಿವಾಸಿಗಳು ಸ್ವಂತ ಸೂರು ಹೊಂದಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಮತ್ತು ಹೋರಾಟಗಳಿಗೆ ಸ್ಪಂದಿಸಲಾಗುತ್ತಿದೆ. ಬಡವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ಮೂರ್ನಾಡು ಪೊಲೀಸ್ ಉಪ ಠಾಣೆಯ ಸಹಾಯಕ ಉಪ ನಿರೀಕ್ಷಕ ಮೊಣ್ಣಪ್ಪ ಪಿ.ಬಿ ಮಾತನಾಡಿ ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೇಸರದ ಸಂಗತಿ.

ಬುಡಕಟ್ಟು ಜನರು ದುಶ್ಚಟಗಳಿಂದ ಮುಕ್ತರಾಗಿ ಉತ್ತಮ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.

ಹೊದ್ದೂರು ಗ್ರಾ.ಪಂ ಸದಸ್ಯರುಗಳಾದ ಕೆ. ಮೊಣ್ಣಪ್ಪ, ಕುಸುಮಾವತಿ ಹಾಗೂ ಹಮೀದ್ ಅವರುಗಳು ಬುಡಕಟ್ಟು ಜನಾಂಗದ ಸಮಸ್ಯೆಗಳು ಮತ್ತು ಪ್ರಗತಿಯ ಕುರಿತು ಮಾತನಾಡಿದರು.

ಬುಡಕಟ್ಟು ಜನಾಂಗದ ಸಾಧಕರಾದ ಲಕ್ಷಿö್ಮ, ಜೆ.ಕೆ. ರಾಮು ಹಾಗೂ ವೈ.ಪಿ. ತಮ್ಮಯ್ಯ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಚೊಟ್ಟೆಪಾರೆ ಹಾಡಿ ತಂಡದ ವತಿಯಿಂದ ನಡೆದ ಹಾಡು ಮತ್ತು ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಬುಡಕಟ್ಟು ಜನಾಂಗದ ಹಾಡು ಹಾಡಿದ ಲಕ್ಷಿö್ಮ ಅವರು ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎ.ಎ. ಅಬ್ದುಲ್ಲ, ಸದಸ್ಯೆ ಲಕ್ಷಿö್ಮ, ಸ್ಕೌಟ್ ಮತ್ತು ಗೈಡ್ ಜಿಲ್ಲಾ ಕಾರ್ಯದರ್ಶಿ ವಸಂತಿ ಎಂ.ಎA, ಉಪಾಧ್ಯಕ್ಷರು ಗಳಾದ ನೀಲಮ್ಮ, ಪಿ.ಎಂ. ರವಿ, ಅರುಣ್ ಕುಮಾರ್, ಖಜಾಂಚಿ ಶಾಂತಿ, ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಕಾರ್ಯ ದರ್ಶಿಗಳಾದ ನಳಿನಿ ಸುವರ್ಣ, ಸುಚಿತ, ಸೂರಜ್, ಗುಲ್ಶನ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಸ್ಕೌಟ್ ಅಂಡ್ ಗೈಡ್ಸ್ ಪ್ರಾರ್ಥಿಸಿ, ರಂಜಿತ್ ಮೌರ್ಯ ನಿರೂಪಿಸಿ, ಆರ್.ಪಿ. ಚಂದ್ರಶೇಖರ್ ವಂದಿಸಿದರು.