ಮಡಿಕೇರಿ, ಆ. ೧೪: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ (ಘಟಕ ವೆಚ್ಚ ರೂ.೧ ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.೨ ಲಕ್ಷ), ಉದ್ಯಮಶೀಲತಾ ಯೋಜನೆ(ಸರಕು ಸಾಗಣಿಕೆ/ ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ)(ಘಟಕ ವೆಚ್ಚ ರೂ.೪ ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೨೭೨-೨೨೫೫೩೧ ಅನ್ನು ಸಂಪರ್ಕಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬAಧಿಸಿದ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ೯೪೮೦೮೪೩೧೫೫, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-೯೪೮೦೮೪೩೧೫೬ ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-೯೪೮೦೮೪೩೧೫೭ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಸಾಲ ಸೌಲಭ್ಯಕ್ಕೆ
ಮಡಿಕೇರಿ: ೨೦೨೫-೨೬ನೇ ಸಾಲಿನ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ : hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ: (ಬ್ಯಾಂಕುಗಳ ಸಹಯೋಗದೊಂದಿಗೆ), ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.೫೦.ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೧.೨೫ ಲಕ್ಷ, ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ೭೦.ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.೨ ಲಕ್ಷ,
ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. ೭೫ ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. ೪ ಲಕ್ಷ. ಪುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಪುಡ್ ಕಿಯೋಸ್ಕ್ ಉದ್ದೇಶಕ್ಕೆ ಘಟಕ ವೆಚ್ಚದ ಶೇ. ೭೫ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.೪ ಲಕ್ಷ ಆಗಿರುತ್ತದೆ.
ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು): ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ ೧೦ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.೫ ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.೨.೫೦ ಲಕ್ಷ ಸಹಾಯಧನ ಮತ್ತು ರೂ. ೨.೫೦ ಲಕ್ಷ ಸಾಲ (ಶೇಕಡ ೪ರಷ್ಟು ಬಡ್ಡಿ ದರ). ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ.
ಈ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ ಮೂಲಕ ಪಡೆದುಕೊಳ್ಳುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ hಣಣಠಿs://ಚಿಜiರಿಚಿmbಚಿvಚಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ hಣಣಠಿs://ತಿತಿತಿ.ಞbಜಛಿ.ಞಚಿಡಿಟಿಚಿಣಚಿಞಚಿ. gov.iಟಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ hಣಣಠಿs://ಞssಞsಛಿ.ಞಚಿಡಿ.ಟಿiಛಿ.iಟಿ/ ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ: hಣಣಠಿs://ಞಣಜಛಿ.ಞಚಿಡಿಟಿಚಿಣಚಿಞಚಿ.gov.iಟಿ
ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್ಲೋಡ್ ಮಾಡಿ ಅರ್ಜಿಯನ್ನು ಸೆಪ್ಟೆಂಬರ್ ೧೦ ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ., ಕೊಡಗು ಜಿಲ್ಲೆ-೫೭೧೨೦೧ ದೂ.ಸಂ.೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚಂದ್ರಪ್ಪ ತಿಳಿಸಿದ್ದಾರೆ.