ಕೂಡಿಗೆ, ಆ. ೧೪: ಇಲ್ಲಿಗೆ ಸಮೀಪದ ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಕುರಿತು ಆರೋಗ್ಯ ಅರಿವು ಕಾರ್ಯಕ್ರಮವು ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಜ್ಮಾ ಫಾತಿಮಾ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಗ್ಯೂ ಜ್ವರ ಹಾಗೂ ಮಲೇರಿಯಾ ಜ್ವರದ ಲಕ್ಷಣಗಳ ಮತ್ತು ಚಿಕಿತ್ಸೆಯ ಬಗ್ಗೆ ತಿಳಿಸಿದರು.
ಸೀನಿಯರ್ ಲ್ಯಾಬ್ ಟೆಕ್‌ನಿಷಿಯನ್ ಸೂಪರ್‌ವೈಸರ್ ಪುಟ್ಟರಾಜು ಕ್ಷಯರೋಗದ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾದ ಸೌರಭ್, ಪ್ರಯೋಗಶಾಲಾ ಸಿಬ್ಬಂದಿ ಯೋಗಿತಾ, ಗಣಕಯಂತ್ರ ಸಹಾಯಕ ಐಶ್ವರ್ಯ, ರಕ್ಷಿತ, ಶಿವಪ್ಪ ಹಾಜರಿದ್ದರು.