ಮಡಿಕೇರಿ, ಆ. ೧೪ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ತಾ. ೧೫ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ ೯ ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯುವ ೭೯ನೇ ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ೧ ಗಂಟೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಆಯೋಜಿಸಿರುವ ೪೫೦ ಹಾಸಿಗೆ ಸಾಮರ್ಥ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ವರುಣ್ ಕುಮಾರ್ ಬಿ. ಅವರು ತಿಳಿಸಿದ್ದಾರೆ.