ಚೆಯ್ಯಂಡಾಣೆ, ಆ. ೧೪: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷರಾಗಿ ವಿ.ಎಸ್. ಸತೀಶ್ ಹಾಗೂ ಉಪಾಧ್ಯಕ್ಷರಾಗಿ ವಿ.ಎ. ಸಿರಾಜ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷರಾದ ರವಿ ಶೆಟ್ಟಿ ಬೈಂದೂರ್ ಅವರು ಕೊಡಗು ಜಿಲ್ಲಾಧ್ಯಕ್ಷರಾಗಿ ವೀರಾಜಪೇಟೆ ಹೆಗ್ಗಳ ಗ್ರಾಮದ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಕಕ್ಕಬ್ಬೆ ಕುಂಜಿಲ ಗ್ರಾಮದ ಸಿರಾಜ್ (ಸಿರಾ) ಅವರನ್ನು ನೇಮಕಮಾಡಿ ಆದೇಶಿಸಿದ್ದಾರೆ.