ಕುಶಾಲನಗರ, ಕುಶಾಲನಗರ ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದ ಬಳಿಯಿಂದ ಹೊರಟ ಮೆರವಣಿಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಿ ರೈತ ಸಹಕಾರ ಭವನದಲ್ಲಿ ಸಮಾಪ್ತಿ ಗೊಂಡಿತು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂ ಡಿದ್ದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.