*ಸಿದ್ದಾಪುರ, ಆ. ೧೬: ಕೊಡಗು ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿತಾಣ ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯ ಚಿಕ್ಲಿಹೊಳೆ ಜಲಾಶಯಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿAದ ಕೂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಇದು ಸರಕಾರದ ‘ಹೊಂಡ ಭಾಗ್ಯ’ ಎಂದು ಪ್ರವಾಸಿಗರು ಲೇವಡಿ ಮಾಡುತ್ತಿದ್ದಾರೆ.

ಮಾನ್ಸೂನ್ ಪ್ರವಾಸೋದ್ಯಮ ಹೆಸರುವಾಸಿಯಾಗುತ್ತಿರುವ ಬೆನ್ನಲ್ಲೇ ಕೊಡಗು ಜಿಲ್ಲೆಗೆ ಪ್ರತಿ ಮಳೆಗಾಲದಲ್ಲೂ ಪ್ರವಾಸಿಗರ ಆಗಮನವಾಗುತ್ತಿದೆ. ಪ್ರತಿದಿನ ಚಿಕ್ಲಿಹೊಳೆ ಜಲಾಶಯದ ಮಾರ್ಗದಲ್ಲಿ ನೂರಾರು ಪ್ರವಾಸಿ ವಾಹನಗಳು ಸಂಚರಿಸುತ್ತವೆ, ಸಾವಿರಾರು ಪ್ರವಾಸಿಗರು ಚಿಕ್ಲಿಹೊಳೆ ಜಲಾಶಯಕ್ಕೆ ಆಗಮಿಸುತ್ತಾರೆ. ಸಾರ್ವಜನಿಕರು ಹಾಗೂ ಗ್ರಾಮಸ್ಥರು ಕೂಡ ಸಂಪರ್ಕಕ್ಕೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಆದರೆ ಪ್ರವಾಸೋದ್ಯಮದ ಅಭಿವೃದ್ಧಿಯ ಕುರಿತು ಭರವಸೆಗಳನ್ನು ನೀಡುತ್ತಿರುವ ಆಡಳಿತ ವ್ಯವಸ್ಥೆ ಕನಿಷ್ಟ ರಸ್ತೆ ವ್ಯವಸ್ಥೆಯನ್ನು ಸುಗಮಗೊಳಿಸಿಲ್ಲ. ರಸ್ತೆ ಅವ್ಯವಸ್ಥೆಯ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ಇದ್ದರೂ ಇಲ್ಲಿಯವರೆಗೆ ದುರಸ್ತಿ ಕಾರ್ಯ ಕೈಗೊಂಡಿಲ್ಲವೆAದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಲಿಹೊಳೆ ಜಲಾಶಯಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಣದೆ ಅನೇಕ ವರ್ಷಗಳೇ ಕಳೆÀೆದಿವೆÉ. ಹೆಸರಿಗೆ ಮಾತ್ರ ಇದು ಹೆದ್ದಾರಿಯಾಗಿದ್ದು, ನಿರ್ವಹಣೆಯಲ್ಲಿ ಸಂಬAಧಪಟ್ಟ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಮಳೆಗಾಲದಲ್ಲಂತೂ ವಾಹನ ಸವಾರರು ಈ ಮಾರ್ಗದಲ್ಲಿ ನರಕಯಾತನೆ ಅನುಭವಿಸುತ್ತಾರೆ. ಹೊಂಡ ಗುಂಡಿಗಳಲ್ಲಿ ನೀರು ನಿಂತು ಕೆಸರುಮಯವಾಗಿ ಸಂಚಾರ ದುಸ್ತರವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಯೋವೃದ್ಧರ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ಸಂಬAಧಪಟ್ಟ ಇಲಾಖೆ ಮತ್ತು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಪ್ರವಾಸಿತಾಣಗಳಿಗೆ ತೆರಳುವ ಎಲ್ಲಾ ರಸ್ತೆಗಳನ್ನು ದುರಸ್ತಿಪಡಿಸಲು ಶಾಸಕರುಗಳು ಕ್ರಮ ಕೈಗೊಳ್ಳಬೇಕು. ಚಿಕ್ಲಿಹೊಳೆ ಜಲಾಶಯಕ್ಕೆ ತೆರಳುವ ರಸ್ತೆಯನ್ನು ಮೊದಲು ಪರಿಶೀಲಿಸಿ ಅಭಿವೃದ್ಧಿ ಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ

- ಅಂಚೆಮನೆ ಸುಧಿ.